ಕುಕ್ಕೆ ಸುಬ್ರಹ್ಮಣ್ಯ : ಡಿ.17 ರಿಂದ ಡಿ.20 ರವರೆಗೆ ಹೊರ ಜಿಲ್ಲೆ-ರಾಜ್ಯದ ಭಕ್ತಾದಿಗಳಿಗೆ ಇಲ್ಲ ಪ್ರವೇಶ!

0
296
Tap to know MORE!

ಸುಬ್ರಹ್ಮಣ್ಯ ಡಿ.15: ಕೊರೋನಾ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಂತರ್ ಜಿಲ್ಲೆ ಹಾಗೂ ಅಂತರ್ ರಾಜ್ಯದ ಭಕ್ತಾದಿಗಳಿಗೆ ನಿರ್ಬಂಧ ಹೇರಲಾಗಿದೆ.

ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳನ್ನು ಹೊರತುಪಡಿಸಿ ಡಿ.17ರಿಂದ ಡಿ.20ರವರೆಗೆ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಡಿ.14ರಂದು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ : ಉಡುತಡಿ ಗ್ರಾಮದಲ್ಲಿ ಕ್ರಿ.ಶ.12 ನೇ ಶತಮಾನದ ಶಾಸನ ಪತ್ತೆ!

ದೇವಳದ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಧಿಕಾರಿಗಳ ಉಲ್ಲೇಖದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೋವಿಡ್‌ ನಿಯಮ ಪಾಲನೆ ಮಾಡುವ ನೆಲೆಯಲ್ಲಿ ಚಂಪಾಷಷ್ಠಿ ಮಹೋತ್ಸವದ ಸಂದರ್ಭ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಅಂತರ್‌ ಜಿಲ್ಲೆ ಹಾಗೂ ಅಂತರ್‌ ರಾಜ್ಯದ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಆಗಮನವನ್ನು ಡಿ.17ರಿಂದ ಡಿ.20ರ ವರೆಗೆ ನಿಷೇದಿಸಿ ಆದೇಶ ಹೊರಡಿಸಿದ್ದಾರೆ.

ವಿಶ್ವದ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ಸೇರಿದಂತೆ 3 ಭಾರತೀಯರಿಗೆ ಸ್ಥಾನ!

LEAVE A REPLY

Please enter your comment!
Please enter your name here