ಕೆಮ್ರಾಲ್: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

0
141
Tap to know MORE!

ಪಕ್ಷಿಕೆರೆ: ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಗ್ರಾಮ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕೆಮ್ರಾಲ್ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾದ ಶ್ರೀ ಕೇಶವ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶ್ರೀಮತಿ ಮಂಜುಳಾ, ಆಶಾ ಕಾರ್ಯಕರ್ತೆ ಶ್ರೀಮತಿ ಶೋಭಾ, ಮಂಡಳಿಯ ಗೌರವಾಧ್ಯಕ್ಷರಾದ ಶ್ರೀ ಕಾರ್ಯಕರ್ತೆ ಧನಂಜಯ ಶೆಟ್ಟಿಗಾರ್, ಅಧ್ಯಕ್ಷರಾದ ಶ್ರೀ ಯಜ್ಞೆಶ್ ಪಿ ಶೆಟ್ಟಿಗಾರ್, ಕಾರ್ಯದರ್ಶಿ ಶ್ರೀ ಧನು ಅಂಚನ್, ಮಕ್ಕಳ ಪೋಷಕರು ಹಾಗೂ ಮಂಡಳಿಯ ಸದಸ್ಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here