ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ
ಹಳೆಯಂಗಡಿಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಕೆರೆಕಾಡು ಗ್ರಾಮದ ಶೋಭಾ ಪ್ರವೀಣ್ ದೇವಾಡಿಗ ಕುಟುಂಬವು ಸುಮಾರು 7 ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದ ಮನೆಯಲ್ಲಿ ವಾಸವಾಗಿರುವುದನ್ನು ಮನಗಂಡು ಸಂಸ್ಥೆ ರಿತೇಶ್ ಕುಮಾರ್ ಎಮ್, ಬರ್ಕೆ,ಮಂಗಳೂರು ಇವರ ಸಹಕಾರದಿಂದ ವಿದ್ಯುತ್ ಸಂಪರ್ಕವು ಉಚಿತವಾಗಿ ಕಲ್ಪಿಸುವ ಉದ್ದೇಶಿತ ಕಾಮಗಾರಿ ಪೂರ್ಣಗೊಂಡಿರುತ್ತದೆ
ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿಆಗಸ್ಟ್ 15 ರಂದು ಶನಿವಾರ ಬೆಳಿಗ್ಗೆ 11:30 ಕ್ಕೆ ದಾನಿಗಳಾದ ಶ್ರೀ ರಿತೇಶ್ ಕುಮಾರ್ ಎಮ್, ಬರ್ಕೆ, ಮಂಗಳೂರು ಇವರು ವಿದ್ಯುತ್ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು ವಿನೋದ್ ಕುಮಾರ್ ಬೊಳ್ಳೂರು, ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಂತೋಷ್ ಕುಮಾರ್, ಸಂಸ್ಥೆಯ ಗೌರವ ಅಧ್ಯಕ್ಷರು ಶ್ರೀ ನಾರಾಯಣ.ಜಿ. ಕೆ, ಉಪಾಧ್ಯಕ್ಷರು ಶ್ರೀ ದೀಪಕ್ ಸುವರ್ಣ, ಕಾರ್ಯದರ್ಶಿ ಜಗದೀಶ್ ಕುಲಾಲ್
ಕಾರ್ಯಕಾರಿ ಸಮಿತಿ ಅಧ್ಯಕ್ಷರು ಸುರೇಶ್ ಶೆಟ್ಟಿ,ಜೊತೆ ಕಾರ್ಯದರ್ಶಿ ಗಣೇಶ್ ದೇವಾಡಿಗ, ಕೋಶಾಧಿಕಾರಿ ಸಂಪತ್ ದೇವಾಡಿಗ,ಸಾಂಸ್ಕೃತಿಕ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಬೇಕಲ್,ಲೆಕ್ಕಪರಿಶೋದಕರು ಶ್ಸುಭಾಸ್ ಅಮೀನ್,ಮಹಿಳಾ ಕಾರ್ಯಧ್ಯಕ್ಷೆ ವಾಣಿ ಮಹೇಶ್ ಉಪಸ್ಥಿತರಿದ್ದರು