ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕೆಂದು ಅವರು ಕೇಳಿಕೊಂಡಿದ್ದಾರೆ.
ಅವರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಹಾಗಾಗಿ ಜಿಲ್ಲಾಧಿಕಾರಿಯವರು ಸದ್ಯ ಪ್ರಸ್ತುತ ಗೃಹ ನಿಗಾವಣೆಯಲ್ಲಿದ್ದು, ಶಿಷ್ಠಾಚಾರದಂತೆ ಗೃಹ ಕಚೇರಿಯಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತಿರುತ್ತಾರೆ.
ಅವರ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ, ಅವರ ವರದಿಯಲ್ಲೂ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ.