ಕೇರಳ: ಮಾಜಿ ಆರೋಗ್ಯ ಸಚಿವೆ ಶೈಲಜಾಗೆ ಹೊಸ ಕ್ಯಾಬಿನೆಟ್‌ನಲ್ಲಿ ಇಲ್ಲ ಸ್ಥಾನ?

0
145
Tap to know MORE!

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆ ಪ್ರಕಟವಾಗಿದ್ದು ಎಲ್‌ಡಿಎಫ್ ಮತ್ತೊಮ್ಮೆ ಸರ್ಕಾರ ರಚನೆ ಮಾಡಲಿದೆ. ಮೇ 20ರಂದು ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. 21 ಸಚಿವರು ಪಿಣರಾಯಿ ವಿಜಯನ್ ಸಂಪುಟ ಸೇರಲಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ವಿಚಾರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದವರು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ. ಆದರೆ ಪಿಣರಾಯಿ ವಿಜಯನ್ 2ನೇ ಅವಧಿಯಲ್ಲಿ ಕೆ. ಕೆ. ಶೈಲಜಾ ಸಚಿವರಾಗಿ ಇರುವುದಿಲ್ಲ ಎಂಬ ಮಾಹಿತಿ ಸಿಕ್ಕಿದೆ.

ಶೈಕ್ಷಣಿಕ ಸಂಸ್ಥೆ – ಶಾಲಾ ಮೈದಾನಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಮುಂದಾದ ರಾಜ್ಯ ಸರ್ಕಾರ!

ಚುನಾವಣೆ ಗೆಲುವಿನಲ್ಲೂ ಇತಿಹಾಸ ನಿರ್ಮಿಸಿದ ಕೆಕೆ ಶೈಲಜಾ
2021ರ ವಿಧಾನಸಭಾ ಚುನಾವಣೆಯಲ್ಲಿ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ಕ್ಷೇತ್ರದಿಂದ ಕೆ. ಕೆ. ಶೈಲಜಾ 60,963 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅತಿ ಹೆಚ್ಚಿನ ಮತಗಳ ಅಂತರದಿಂದ ಗೆದ್ದ ಶಾಸಕರು ಎಂಬ ದಾಖಲೆಯನ್ನು ಬರೆದಿದ್ದಾರೆ.

ಮೊದಲ ಬಾರಿಗೆ ಶಾಸಕರಾದ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಈಗ ಬಂಗಾಳದ ಕ್ರೀಡಾ ಸಚಿವ!

ಗುರುವಾರ ಪಿಣರಾಯಿ ವಿಜಯನ್ ಸಂಪುಟಕ್ಕೆ ಹೊಸ ಸಚಿವರು ಸೇರ್ಪಡೆಯಾಗಲಿದ್ದಾರೆ. ಸ್ಪೀಕರ್ ಆಗಿ ಎಂ. ಬಿ. ರಾಜೇಶ್ ಆಯ್ಕೆಯಾಗಲಿದ್ದಾರೆ. ಆದರೆ ಸಂಪುಟಕ್ಕೆ ಕೆ. ಕೆ. ಶೈಲಜಾ ಅವರು ಸೇರ್ಪಡೆಗೊಳ್ಳುತ್ತಿಲ್ಲ ಎಂಬ ಸುದ್ದಿಗಳು ಹಬ್ಬಿವೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೋವಿಡ್ ನಿಯಂತ್ರಣದ ವಿಚಾರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆಗಳಿಸಿದ ಕೆ. ಕೆ. ಶೈಲಜಾ ಸಂಪುಟಕ್ಕೆ ಏಕೆ ಸೇರುತ್ತಿಲ್ಲ? ಎಂಬುದು ಸದ್ಯದ ಪ್ರಶ್ನೆಯಾಗಿದೆ. ರಾಜ್ಯದ ಆರೋಗ್ಯ ಖಾತೆ ಯಾರ ಪಾಲಾಗಲಿದೆ? ಎಂಬುದು ಕುತೂಹಲ ಮೂಡಿಸಿದೆ.

LEAVE A REPLY

Please enter your comment!
Please enter your name here