ಕೊರೊನಾಗೆ ಬಲಿಯಾದ ಸ್ಯಾಂಡಲ್ ವುಡ್ ನಿರ್ಮಾಪಕ!

0
47

ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ವೈರಸ್ ಹೆಚ್ಚುತ್ತಿರುವಾಗ ಕೊರೊನಾ ಮಹಾಮಾರಿಗೆ ಸ್ಯಾಂಡಲ್ ವುಡ್ ನಲ್ಲಿ ಮೊದಲ ಬಲಿಯಾಗಿದೆ.
ಗ್ರಾಮಾಯಣ ಸಿನಿಮಾ ನಿರ್ಮಾಪಕ ಎನ್.ಎಲ್.ಎನ್ ಮೂರ್ತಿ ಅವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ವಿನಯ್ ರಾಜ್ ಕುಮಾರ್ ನಟನೆಯ ಗ್ರಾಮಾಯಣ ಸಿನಿಮಾ ನಿರ್ಮಾಪಕ ಮೂರ್ತಿ ಅವರ ತಾಯಿ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದರು. ಇದಾದ ಬಳಿಕ ನಿರ್ಮಾಪಕ ಕಡಿಮೆ ರಕ್ತದೊತ್ತಡದಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಬಳಿಕ ನಿರ್ಮಾಪಕ ಮೂರ್ತಿ ಮೃತದೇಹವನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಬಿಜಿಎಸ್ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here