ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 162 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 3991 ಗೆ ಏರಿದ್ದು, 2,682 ಪ್ರಕರಣಗಳು ಸಕ್ರಿಯವಾಗಿದೆ.
ಜಿಲ್ಲೆಯಲ್ಲಿಂದು 51 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 1,231 ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಸುಮಾರು 78 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.
ಉಡುಪಿಯಲ್ಲಿ ಒಂದು ಹಂತಕ್ಕೆ ಬ್ರೇಕ್ ನೀಡಿದ್ದ ಕೊರೋನಾ, ಇತ್ತೀಚೆಗೆ ಸತತವಾಗಿ ಶತಕ ದಾಖಲಿಸುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 281 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,686 ಗೆ ಏರಿದೆ.
ಸದ್ಯ 910 ಸಕ್ರಿಯ ಪ್ರಕರಣಗಳು ಇದ್ದು, ಬಹುತೇಕ ಪ್ರಕರಣಗಳು ಕಳೆದ ಒಂದೆರಡು ವಾರದಲ್ಲಿ ಬಂದಿರುತ್ತದೆ. ಸೋಂಕಿನ ಹಾವಳಿ ಮುಂದೆ ಇಂದು 34 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 1,765 ಗೆ ಏರಿದೆ. ಅದಲ್ಲದೆ ಜಿಲ್ಲೆಯಲ್ಲಿ ಇದುವರೆಗೆ 11 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.
ಕೇರಳದ ಕಾಸರಗೋಡಿನಲ್ಲಿ ಇಂದು 101 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1,073 ಗೆ ಏರಿದ್ದು, 538 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 14 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 540 ಸೋಂಕಿತರು ಚೇತರಿಕೆ ಕಂಡಿದ್ದಾರೆ.