ನವದೆಹಲಿ: 12ನೇ ತರಗತಿಯ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಶುಕ್ರವಾರ ಅರ್ಜಿ ಸಲ್ಲಿಕೆಯಾಗಿದೆ.
ವಕೀಲೆ ಮಮತಾ ಶರ್ಮಾ ಎಂಬುವವರು ಅರ್ಜಿ ಸಲ್ಲಿಸಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ 12ನೇ ತರಗತಿ ಕೆಲ ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಪರೀಕ್ಷೆ ಕುರಿತು ಹಲವು ಸಮಸ್ಯೆಗೆ ಬಗ್ಗೆ ಚರ್ಚಿಸಿದ್ದಾರೆ. ಹೀಗಾಗಿ ಅವರ ಪರವಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೇನೆ ಎಂದಿದ್ದಾರೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾಲದಲ್ಲಿ 12ನೇ ತರಗತಿಯ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಅಲ್ಲದೇ ಈ ವೇಳೆ ಆನ್ಲೈನ್ನಲ್ಲಿಯೇ ಪರೀಕ್ಷೆ ನಡೆಸುವುದು ಸಹ ಕಷ್ಟಸಾಧ್ಯ. ಅಷ್ಟೇ ಅಲ್ಲ 12ನೇ ತರಗತಿ ಫಲಿತಾಂಶ ಘೋಷಣೆಯಲ್ಲಿ ವಿಳಂಬವಾದರೆ ವಿದೇಶಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ಇನ್ನು ಸಿಬಿಎಸ್ಇ ಮತ್ತು ಸಿಐಎಸ್ಸಿಇ ಬೋರ್ಡ್ಗಳು ನಿರ್ದಿಷ್ಟ ಸಮಯದೊಳಗೆ ಫಲಿತಾಂಶ ಘೋಷಿಸಲು ಮುಂದಾಗಬೇಕು. ಇಲ್ಲದಿದ್ದರೆ ಇದು ಸುಮಾರು 12 ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣವಾಗುತ್ತಿರುವುದರಿಂದ ಈ ಮೊದಲು ಮೇ 4 ರಿಂದ ಜೂನ್ 14ರ ವರೆಗೆ ನಿಗದಿಯಾಗಿದ್ದ 12ನೇ ತರಗತಿಯ ಸಿಬಿಎಸ್ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ.