ಕೊರೋನಾ ಜೊತೆಗೆ ನಾವು ಬಾಳಲು ಕಲಿಯಬೇಕು : ಯಡಿಯೂರಪ್ಪ

0
221
Tap to know MORE!

“ನಾವು ಆಂಬ್ಯುಲೆನ್ಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿದ್ದೇವೆ. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೇವೆ. ಆದರೆ ನಮಗೆ ಬೇರೆ ಆಯ್ಕೆಗಳಿಲ್ಲ, ಈ ವೈರಸ್‌ನೊಂದಿಗೆ ಬದುಕಲು ನಾವು ಕಲಿಯಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೂ ಸಹ ಇದೇ ಮಾತನ್ನು ಹೇಳಿದ್ದಾರೆ.” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಯಡಿಯೂರಪ್ಪ ಅವರು ವಿಧಾನ ಸೌಧದಲ್ಲಿ ಇಂದು ಬಾಬು ಜಗ್ ಜೀವನ್ ರಾಮ್ ಅವರ ನಿಧನ ವಾರ್ಷಿಕೋತ್ಸವದ ಸಮಾರಂಭದಲ್ಲಿ, ಗೌರವ ಸಲ್ಲಿಸಿದ ಬಳಿಕ ಈ ಹೇಳಿಕೆ ನೀಡಿದ್ದಾರೆ.

ಕೊರೋನಾ ಸಾಂಕ್ರಾಮಿಕವು ವ್ಯಾಪಕವಾಗಿ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಅನೇಕ ವ್ಯವಸ್ಥೆಗಳನ್ನು ಮಾಡಿದೆ ಎಂದು ಮುಖ್ಯಮಂತ್ರಿ ಇದೇ ವೇಳೆ ಹೇಳಿದರು.

ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ರಾಜ್ಯದಲ್ಲಿ ನಿನ್ನೆಯವರೆಗೆ 23,474 ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, 372 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here