ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 204 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 5,713 ಗೆ ಏರಿದ್ದು, 2,929 ಪ್ರಕರಣಗಳು ಸಕ್ರಿಯವಾಗಿದೆ.
ಜಿಲ್ಲೆಯಲ್ಲಿಂದು 70 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 2,631 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 5 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸುಮಾರು 153 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.
ಉಡುಪಿಯಲ್ಲಿ ಒಂದು ಹಂತಕ್ಕೆ ಬ್ರೇಕ್ ನೀಡಿದ್ದ ಕೊರೋನಾ, ಇತ್ತೀಚೆಗೆ ಸತತವಾಗಿ ಶತಕ ದಾಖಲಿಸುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 213 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,356 ಗೆ ಏರಿದೆ.
ಸದ್ಯ 1,805 ಸಕ್ರಿಯ ಪ್ರಕರಣಗಳು ಇದೆ. ಸೋಂಕಿನ ಹಾವಳಿ ಮುಂದೆ ಇಂದು 54 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 2,522 ಗೆ ಏರಿದೆ. ಜಿಲ್ಲೆಯಲ್ಲಿ ಇದುವರೆಗೆ 29 ಸೋಂಕಿತರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕೇರಳದ ಕಾಸರಗೋಡಿನಲ್ಲಿ ಇಂದು 52 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1,643 ಗೆ ಏರಿದ್ದು, 640 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 129 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 997 ಸೋಂಕಿತರು ಚೇತರಿಕೆ ಕಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 5 ಸೋಂಕಿತರು ಸಾವನ್ನಪ್ಪಿದ್ದಾರೆ.
ಕೇರಳ ರಾಜ್ಯದಲ್ಲೂ ಬಹಳ ವೇಗವಾಗಿ ಸೋಂಕು ಹರಡುತ್ತಲೇ ಇದೆ. ಇಂದಿನ ವರದಿಯಲ್ಲಿ, ರಾಜ್ಯದಲ್ಲಿ 1,310 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಸಂಪರ್ಕದ ಮೂಲಕವೇ ಸುಮಾರು 900ಕ್ಕೂ ಅಧಿಕ ಜನರು ಸೋಂಕಿಗೆ ತುತ್ತಾಗಿರುತ್ತಾರೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 23,614 ಏರಿಕೆಯಾಗಿದ್ದು, 10,495 ಪ್ರಕರಣಗಳು ಸಕ್ರಿಯವಾಗಿವೆ.
ಇಂದು ಕೇರಳ ರಾಜ್ಯದಲ್ಲಿ 864 ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡಿರುತ್ತಾರೆ. ಇದುವರೆಗೆ ರಾಜ್ಯದಲ್ಲಿ 13,023 ಸೋಂಕಿತರು ಗುಣಮುಖರಾಗಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ಇಂದು 3 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 74 ಸೋಂಕಿತರು ಸಾವನ್ನಪ್ಪಿದಂತಾಗಿದೆ.