ಕೊರೋನಾ- ದ.ಕ ದಲ್ಲಿ ನರ್ವಸ್ ನೈಂಟಿ – ಉಡುಪಿಯಲ್ಲಿ ಅರ್ಧಶತಕ

0
53

ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಮೊದಮೊದಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅನಿವಾಸಿ ಭಾರತೀಯರು ಭಾರತಕ್ಕೆ ಮರಳಿದ್ದರಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿತ್ತು. ಆದರೆ ಈಗ ಜಿಲ್ಲೆಯಲ್ಲಿ ಹರಡಲು ಪ್ರಾರಂಭವಾಗಿದ್ದು, ನಗರದಿಂದ ಗ್ರಾಮಾಂತರ ಪ್ರದೇಶಕ್ಕೂ ಕೊರೋನಾ ಕಾಲಿಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ಶತಕ ಬಾರಿಸುತ್ತಿದ್ದ ಕೊರೋನಾ, ಇಂದು “ನರ್ವಸ್ ನೈಂಟಿ” ದಾಖಲಾಗಿದೆ. ಜಿಲ್ಲೆಯಲ್ಲಿ ಇಂದು 91 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 2,444 ಗೆ ಏರಿದೆ. ಇದರಿಂದ 1,511 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿಂದು 65 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 886 ಸೋಂಕಿತರು ಗುಣಮುಖರಾಗಿದ್ದಾರೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ 3 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 51 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲಿ ಕಳೆದ ತಿಂಗಳು ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿತ್ತು. ಬಳಿಕ ಜಿಲ್ಲೆಯಲ್ಲಿ ಜಾರಿಯಾದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಾಣಲಾರಂಭಿಸಿತು. ಇದೀಗ ಸೋಂಕಿತರ ಸಂಖ್ಯೆ ಮತ್ತೆ ಏರುತ್ತಿದ್ದು, ಇಂದು 72 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1733ಗೆ ಏರಿದೆ.

ಸದ್ಯ 383 ಸಕ್ರಿಯ ಪ್ರಕರಣಗಳು ಇದ್ದು, ಬಹುತೇಕ ಪ್ರಕರಣಗಳು ಕಳೆದ ಒಂದು ವಾರದಲ್ಲಿ ಬಂದಿರುತ್ತದೆ. ಸೋಂಕಿನ ಹಾವಳಿ ಮುಂದೆ ಇಂದು 80 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 1,349ಗೆ ಏರಿದೆ. ಉಡುಪಿಯಲ್ಲಿ ಇದುವರೆಗೆ 3 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಕೊರೋನಾ ಹಾವಳಿ ಮತ್ತೆ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಸಕ್ರಿಯ ಸೋಂಕಿತರ ಸಂಖ್ಯೆಯ ಏರುಗತಿಯಲ್ಲಿ ಸಾಗುತ್ತಿದೆ. ಇಂದು ಜಿಲ್ಲೆಯಲ್ಲಿ 44 ಸೋಂಕಿತರ ವರದಿಯಾಗಿದೆ. ಸುಮಾರು ಎರಡು ತಿಂಗಳಲ್ಲಿ ಕೇವಲ ಎರಡನೇ ಬಾರಿಗೆ ಜಿಲ್ಲೆಯಲ್ಲಿ 40ಕ್ಕೂ ಅಧಿಕ ಸೋಂಕಿತರ ವರದಿಯಾಗಿರುತ್ತದೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 5 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 443 ಸೋಂಕಿತರು ಚೇತರಿಕೆ ಕಂಡಿದ್ದಾರೆ.

LEAVE A REPLY

Please enter your comment!
Please enter your name here