ಕೊರೋನಾ : ದ.ಕ 149; ಉಡುಪಿ 173; ಕಾಸರಗೋಡು 128

0
67

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 149 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 6,542 ಗೆ ಏರಿದ್ದು, 3,343 ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 82 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 3,009 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 10 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸುಮಾರು 190 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 173 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,141 ಗೆ ಏರಿದೆ.

ಸದ್ಯ 2,027 ಸಕ್ರಿಯ ಪ್ರಕರಣಗಳು ಇದೆ‌. ಸೋಂಕಿನ ಹಾವಳಿ ಮುಂದೆ ಇಂದು 124 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 3,072 ಗೆ ಏರಿದೆ. ಜಿಲ್ಲೆಯಲ್ಲಿ ಇಂದು 2 ಸೋಂಕಿತರ ಬಲಿಯಾಗಿದ್ದು, ಇದುವರೆಗೆ 44 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಇಂದು 128 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 2,194 ಗೆ ಏರಿದ್ದು, 951 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 105 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 1,235 ಸೋಂಕಿತರು ಚೇತರಿಕೆ ಕಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 6 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳ ರಾಜ್ಯದಲ್ಲೂ ಬಹಳ ವೇಗವಾಗಿ ಸೋಂಕು ಹರಡುತ್ತಲೇ ಇದೆ. ಇಂದಿನ ವರದಿಯಲ್ಲಿ, ರಾಜ್ಯದಲ್ಲಿ 1,195 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಸಂಪರ್ಕದ ಮೂಲಕವೇ ಸುಮಾರು 971 ಜನರು ಸೋಂಕಿಗೆ ತುತ್ತಾಗಿರುತ್ತಾರೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 29,151 ಏರಿಕೆಯಾಗಿದ್ದು, 11,501 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಕೇರಳ ರಾಜ್ಯದಲ್ಲಿ 1,238 ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡಿರುತ್ತಾರೆ. ಇದುವರೆಗೆ ರಾಜ್ಯದಲ್ಲಿ 17,537 ಸೋಂಕಿತರು ಗುಣಮುಖರಾಗಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ಇಂದು 7 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 95 ಸೋಂಕಿತರು ಸಾವನ್ನಪ್ಪಿದಂತಾಗಿದೆ.

LEAVE A REPLY

Please enter your comment!
Please enter your name here