ಕೊರೋನಾ : ದ.ಕ 149 ; ಉಡುಪಿ 84 ; ಕಾಸರಗೋಡು 40!

0
181
Tap to know MORE!

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.

ಅದೇ ರೀತಿ ಮಾಡೆಲ್ ರಾಜ್ಯವಾಗಿದ್ದ ಕೇರಳದಲ್ಲೂ ಸಮುದಾಯಕ್ಕೆ ಹಬ್ಬಿರುವ ಸಂಶಯ ವ್ಯಕ್ತವಾಗಿದೆ. ಶೇ.50ಕ್ಕಿಂತಲೂ ಅಧಿಕ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದಲೇ ಬರುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 149 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 3,834 ಗೆ ಏರಿದ್ದು, 2,574 ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 127 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 1,675 ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಸುಮಾರು 73 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲಿ ಒಂದು ಹಂತಕ್ಕೆ ಬ್ರೇಕ್ ನೀಡಿದ್ದ ಕೊರೋನಾ, ಇತ್ತೀಚೆಗೆ ಸತತವಾಗಿ ಶತಕ ದಾಖಲಿಸುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 84 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,405 ಗೆ ಏರಿದೆ.

ಸದ್ಯ 653 ಸಕ್ರಿಯ ಪ್ರಕರಣಗಳು ಇದ್ದು, ಬಹುತೇಕ ಪ್ರಕರಣಗಳು ಕಳೆದ ಒಂದೆರಡು ವಾರದಲ್ಲಿ ಬಂದಿರುತ್ತದೆ. ಸೋಂಕಿನ ಹಾವಳಿ ಮುಂದೆ ಇಂದು 114 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 1,731 ಗೆ ಏರಿದೆ. ಅದಲ್ಲದೆ ಜಿಲ್ಲೆಯಲ್ಲಿ ಇದುವರೆಗೆ 10 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಇಂದು 28 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 932 ಗೆ ಏರಿದ್ದು, 409 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 6 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 529 ಸೋಂಕಿತರು ಚೇತರಿಕೆ ಕಂಡಿದ್ದಾರೆ.

ಕೇರಳ ರಾಜ್ಯದಲ್ಲಿ ಇಂದು ದಾಖಲೆಯ 720 ಸೋಂಕಿತರ ವರದಿಯಾಗಿದೆ. ಇವುಗಳ ಪೈಕಿ 528 ಪ್ರಕರಣಗಳು ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಬಂದಿರುವುದರಿಂದ, ಜನತೆಯಲ್ಲಿ ಆತಂಕ ಮನೆಮಾಡಿದೆ. ಇದೀಗ, ಒಟ್ಟು ಸೋಂಕಿತರ ಸಂಖ್ಯೆ 13,995 ಗೆ ಏರಿದ್ದು, 8,056 ಪ್ರಕರಣಗಳು ಸಕ್ರಿಯವಾಗಿದೆ. ಅದಲ್ಲದೆ, ಇಂದು ರಾಜ್ಯದಲ್ಲಿ 274 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ ಒಟ್ಟು 5,890 ಸೋಂಕಿತರು ಚೇತರಿಸಿಕೊಂಡಿರುತ್ತಾರೆ. ಇಂದು ಒಬ್ಬ ಸೋಂಕಿತ ಸಾವನ್ನಪ್ಪಿದ್ದರಿಂದ, ಒಟ್ಟು ಸಾವಿನ ಸಂಖ್ಯೆ 45 ಕ್ಕೆ ಏರಿದೆ.

LEAVE A REPLY

Please enter your comment!
Please enter your name here