ಕೊರೋನಾ : ದ.ಕ 153; ಉಡುಪಿ 126

0
124
Tap to know MORE!

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 153 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 6,168 ಗೆ ಏರಿದ್ದು, 3,138  ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 124 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 2,854 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 7 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸುಮಾರು 161 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲಿ ಒಂದು ಹಂತಕ್ಕೆ ಬ್ರೇಕ್ ನೀಡಿದ್ದ ಕೊರೋನಾ, ಇತ್ತೀಚೆಗೆ ಸತತವಾಗಿ ಶತಕ ದಾಖಲಿಸುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 126 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,800 ಗೆ ಏರಿದೆ.

ಸದ್ಯ 1,952 ಸಕ್ರಿಯ ಪ್ರಕರಣಗಳು ಇದೆ‌. ಸೋಂಕಿನ ಹಾವಳಿ ಮುಂದೆ ಇಂದು 72 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 2,812 ಗೆ ಏರಿದೆ. ಜಿಲ್ಲೆಯಲ್ಲಿ ಇದುವರೆಗೆ 36 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here