ಕೊರೋನಾ : ದ.ಕ 218 ; ಉಡುಪಿ 162 ; ಕಾಸರಗೋಡು 47!

0
165
Tap to know MORE!

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 218 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 4,214 ಗೆ ಏರಿದ್ದು, 2,253 ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 118 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 1,862 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 7 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸುಮಾರು 85 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲಿ ಒಂದು ಹಂತಕ್ಕೆ ಬ್ರೇಕ್ ನೀಡಿದ್ದ ಕೊರೋನಾ, ಇತ್ತೀಚೆಗೆ ಸತತವಾಗಿ ಶತಕ ದಾಖಲಿಸುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 162 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,846 ಗೆ ಏರಿದೆ.

ಸದ್ಯ 994 ಸಕ್ರಿಯ ಪ್ರಕರಣಗಳು ಇದ್ದು, ಬಹುತೇಕ ಪ್ರಕರಣಗಳು ಕಳೆದ ಒಂದೆರಡು ವಾರದಲ್ಲಿ ಬಂದಿರುತ್ತದೆ. ಸೋಂಕಿನ ಹಾವಳಿ ಮುಂದೆ ಇಂದು 76 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 1,841 ಗೆ ಏರಿದೆ. ಅದಲ್ಲದೆ ಜಿಲ್ಲೆಯಲ್ಲಿ ಇದುವರೆಗೆ 11 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಇಂದು 47 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1,120 ಗೆ ಏರಿದ್ದು, 507 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 36 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 612 ಸೋಂಕಿತರು ಚೇತರಿಕೆ ಕಂಡಿದ್ದಾರೆ.

ಕೇರಳ ರಾಜ್ಯದಲ್ಲೂ ಬಹಳ ವೇಗವಾಗಿ ಸೋಂಕು ಹರಡುತ್ತಲೇ ಇದೆ. ಇಂದಿನ ವರದಿಯಲ್ಲಿ, ರಾಜ್ಯದಲ್ಲಿ 1,078 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಸಂಪರ್ಕದ ಮೂಲಕವೇ ಸುಮಾರು 798 ಜನರು ಸೋಂಕಿಗೆ ತುತ್ತಾಗಿರುತ್ತಾರೆ. ರಾಜ್ಯದಲ್ಲಿ ಸತತ ಎರಡನೇ ದಿನ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1000 ದಾಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 16,110ಕ್ಕೆ ಏರಿಕೆಯಾಗಿದ್ದು, 9,465 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ರಾಜ್ಯದಲ್ಲಿ 432 ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡಿರುತ್ತಾರೆ. ಇದುವರೆಗೆ ರಾಜ್ಯದಲ್ಲಿ 6,594 ಸೋಂಕಿತರು ಗುಣಮುಖರಾಗಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ಇಂದು 5 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 51 ಸೋಂಕಿತರು ಸಾವನ್ನಪ್ಪಿದಂತಾಗಿದೆ.

LEAVE A REPLY

Please enter your comment!
Please enter your name here