ಕೊರೋನಾ : ದ.ಕ 225 ; ಉಡುಪಿ 170; ಕಾಸರಗೋಡು 91

0
177
Tap to know MORE!

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 225 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 6,393 ಗೆ ಏರಿದ್ದು, 3,290  ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 73 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 2,927 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 4 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸುಮಾರು 180 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

(ದ.ಕ ಜಿಲ್ಲೆಯಲ್ಲಿ ಇಂದು 4 ಸೋಂಕಿತರು ಸಾವನ್ನಪ್ಪಿದ್ದು, ರಾಜ್ಯ ಬುಲೆಟಿನ್ ನಲ್ಲಿ 13 ಸಾವುಗಳು ಎಂದು ತಪ್ಪಾಗಿ ಉಲ್ಲೇಖವಾಗಿದೆ)

ಉಡುಪಿಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 170 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,970 ಗೆ ಏರಿದೆ.

ಸದ್ಯ 2,038 ಸಕ್ರಿಯ ಪ್ರಕರಣಗಳು ಇದೆ‌. ಸೋಂಕಿನ ಹಾವಳಿ ಮುಂದೆ ಇಂದು 161 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 2,889 ಗೆ ಏರಿದೆ. ಜಿಲ್ಲೆಯಲ್ಲಿ ಇಂದು 6 ಸೋಂಕಿತರ ಬಲಿಯಾಗಿದ್ದು, ಇದುವರೆಗೆ 42 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಇಂದು 91 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 2,066 ಗೆ ಏರಿದ್ದು, 928 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 25 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 1,130 ಸೋಂಕಿತರು ಚೇತರಿಕೆ ಕಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 6 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳ ರಾಜ್ಯದಲ್ಲೂ ಬಹಳ ವೇಗವಾಗಿ ಸೋಂಕು ಹರಡುತ್ತಲೇ ಇದೆ. ಇಂದಿನ ವರದಿಯಲ್ಲಿ, ರಾಜ್ಯದಲ್ಲಿ 1,083 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಸಂಪರ್ಕದ ಮೂಲಕವೇ ಸುಮಾರು 902 ಜನರು ಸೋಂಕಿಗೆ ತುತ್ತಾಗಿರುತ್ತಾರೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 27,956 ಏರಿಕೆಯಾಗಿದ್ದು, 11,540 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಕೇರಳ ರಾಜ್ಯದಲ್ಲಿ 1,021 ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡಿರುತ್ತಾರೆ. ಇದುವರೆಗೆ ರಾಜ್ಯದಲ್ಲಿ 16,299 ಸೋಂಕಿತರು ಗುಣಮುಖರಾಗಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ಇದುವರೆಗೆ ಒಟ್ಟು 88 ಸೋಂಕಿತರು ಸಾವನ್ನಪ್ಪಿದಂತಾಗಿದೆ.

LEAVE A REPLY

Please enter your comment!
Please enter your name here