ಕೊರೋನಾ : ದ.ಕ 89 ; ಉಡುಪಿ 99; ಕಾಸರಗೋಡು 28!

0
178
Tap to know MORE!

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಆರಂಭಿಕ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅನಿವಾಸಿ ಭಾರತೀಯರು ಭಾರತಕ್ಕೆ ಮರಳಿದ್ದರಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿತ್ತು ಎನ್ನಲಾಗುತ್ತಿತ್ತು. ಆದರೆ ಸೋಂಕು, ಈಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡಲು ಪ್ರಾರಂಭವಾಗಿದ್ದು, ನಗರ ಪ್ರದೇಶದಿಂದ ಗ್ರಾಮಾಂತರ ಪ್ರದೇಶಕ್ಕೂ ಕೊರೋನಾ ಕಾಲಿಟ್ಟಿದೆ.

ಅದೇ ರೀತಿ ಬಹಳ ಸಮಯಗಳ ಕಾಲ ಸೋಂಕಿತರ ವರದಿಯಾಗದ ಕೇರಳ ರಾಜಧಾನಿ ತಿರುವನಂತಪುರ ಸೇರಿದಂತೆ ಇಡೀಯ ಕೇರಳದಲ್ಲೂ ಸೋಂಕು ವ್ಯಾಪಕವಾಗಿ ಹರಡುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 89 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 3,685 ಗೆ ಏರಿದ್ದು, 2,055 ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 104 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 1,548 ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಸುಮಾರು 70 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲಿ ಒಂದು ಹಂತಕ್ಕೆ ಬ್ರೇಕ್ ನೀಡಿದ್ದ ಕೊರೋನಾ, ಇತ್ತೀಚೆಗೆ ಸತತವಾಗಿ ಶತಕ ದಾಖಲಿಸುತ್ತಿದೆ. ಮಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 99 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,321ಗೆ ಏರಿದೆ.

ಸದ್ಯ 661 ಸಕ್ರಿಯ ಪ್ರಕರಣಗಳು ಇದ್ದು, ಬಹುತೇಕ ಪ್ರಕರಣಗಳು ಕಳೆದ ಒಂದು ವಾರದಲ್ಲಿ ಬಂದಿರುತ್ತದೆ. ಸೋಂಕಿನ ಹಾವಳಿ ಮುಂದೆ ಇಂದು 22 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 1,650 ಗೆ ಏರಿದೆ. ಜಿಲ್ಲೆಯಲ್ಲಿ ಇದುವರೆಗೆ 10 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಇಂದು 28 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 932 ಗೆ ಏರಿದ್ದು, 409 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 10 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 522 ಸೋಂಕಿತರು ಚೇತರಿಕೆ ಕಂಡಿದ್ದಾರೆ.

ಕೇರಳ ರಾಜ್ಯದಲ್ಲಿ ಇಂದು ದಾಖಲೆಯ 794 ಸೋಂಕಿತರ ವರದಿಯಾಗಿದೆ. ಇವುಗಳ ಪೈಕಿ 519 ಪ್ರಕರಣಗಳು ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಬಂದಿರುವುದರಿಂದ, ಜನತೆಯಲ್ಲಿ ಆತಂಕ ಮನೆಮಾಡಿದೆ. ಇದೀಗ, ಒಟ್ಟು ಸೋಂಕಿತರ ಸಂಖ್ಯೆ 13,274 ಗೆ ಏರಿದ್ದು, 7,613 ಪ್ರಕರಣಗಳು ಸಕ್ರಿಯವಾಗಿದೆ. ಅದಲ್ಲದೆ, ಇಂದು ರಾಜ್ಯದಲ್ಲಿ 245 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ ಒಟ್ಟು 5,618 ಸೋಂಕಿತರು ಚೇತರಿಸಿಕೊಂಡಿರುತ್ತಾರೆ. ಇಂದು ಒಬ್ಬ ಸೋಂಕಿತ ಸಾವನ್ನಪ್ಪಿದ್ದರಿಂದ, ಒಟ್ಟು ಸಾವಿನ ಸಂಖ್ಯೆ 43 ಕ್ಕೆ ಏರಿದೆ.

LEAVE A REPLY

Please enter your comment!
Please enter your name here