ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಸಂಜೆ 4 ಗಂಟೆಗೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು, ಕರ್ಫ್ಯೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಕೊರೋನಾ ಲಸಿಕೆ ಅಭಿಯಾನದ ಬೆನ್ನಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಅಮಿತ್ ಶಾ
ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವ ಸುಧಾಕರ್ ಅವರಿಂದ ಮಾಹಿತಿ ಪಡೆದಿದ್ದಾರೆ. ಕೂಡಲೇ ಚಾಮರಾಜನಗರಕ್ಕೆ ತೆರಳಿ ನೇರ ಮಾಹಿತಿ ಪಡೆಯುವಂತೆ ಸಚಿವ ಸುಧಾಕರ್ ಗೆ ಸಿಎಂ ತಿಳಿಸಿದ್ದಾರೆ.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ