ಕೊರೋನಾ : ರಾಜ್ಯದಲ್ಲಿ 2 ಸಾವಿರಕ್ಕೆ ಏರಿದ  ಸಾವಿನ ಸಂಖ್ಯೆ

0
74

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾವು-ನೋವಿನ ಸಂಖ್ಯೆ ನಿಧಾನಗತಿಯಲ್ಲಿ ಏರುತ್ತಿದ್ದು, ಇಂದಿನ 102 ಸೇರಿದಂತೆ ಇದುವರೆಗೆ 2 ಸಾವಿರಕ್ಕೂ ಅಧಿಕ ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರು ನಗರವೊಂದರಲ್ಲೇ 957 ಸೋಂಕಿತರ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಇತ್ತೀಚೆಗೆ ಪ್ರತಿದಿನ 4-5 ಸಾವಿರ ಹೊಸ ಸೋಂಕಿತರ ವರದಿಯಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದ್ದು, ಇದನ್ನು ತಲುಪಿದ ಕೇವಲ ಐದನೇ ರಾಜ್ಯವಾಗಿದೆ. (ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಆಂಧ್ರಪ್ರದೇಶ ಮೊದಲ ನಾಲ್ಕು ರಾಜ್ಯಗಳು)

ರಾಜ್ಯದಲ್ಲಿಂದು 5,536 ಸೋಂಕಿತರು ವರದಿಯಾಗಿದೆ. ರಾಜ್ಯದಲ್ಲಿ ಸತತ ಆರನೇ ದಿನ 24 ಗಂಟೆಯಲ್ಲಿ 5 ಸಾವಿರಕ್ಕೂ ಅಧಿಕ ಸೋಂಕಿತರ ಪತ್ತೆಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1,07,001 ಗೆ ಏರಿಕೆಯಾಗಿದ್ದು, 64,434 ಪ್ರಕರಣಗಳು ಸಕ್ರಿಯವಾಗಿದೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಇಂದಿನ 1,898 ಸೇರಿದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 35,102 ಗೆ ಏರಿದೆ. ಬಳ್ಳಾರಿ (3,181) ಮತ್ತು ದಕ್ಷಿಣ ಕನ್ನಡ  (2,696) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, 5 ಜಿಲ್ಲೆಗಳಲ್ಲಿ 200ಕ್ಕೂ ಅಧಿಕ ಮತ್ತು 11 ಇತರ ಜಿಲ್ಲೆಗಳಲ್ಲಿ 100ಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಬಳ್ಳಾರಿ 452, ಕಲಬುರ್ಗಿ 283, ಬೆಳಗಾವಿ 228, ಮೈಸೂರು 220, ತುಮಕೂರು 207, ಕೋಲಾರ 174, ದಕ್ಷಿಣ ಕನ್ನಡ 173, ಧಾರವಾಡ 173, ವಿಜಯಪುರ 153, ಕೊಪ್ಪಳ 144, ದಾವಣಗೆರೆ 135, ಬಾಗಲಕೋಟೆ 115, ಉಡುಪಿ 109, ಹಾಸನ 108, ಬೆಂಗಳೂರು ಗ್ರಾಮಾಂತರ 138, ರಾಮನಗರ 101 ಹೊಸ ಸೋಂಕಿತರ ವರದಿಯಾಗಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು ಒಟ್ಟು 2,819 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದುವರೆಗೆ, ಒಟ್ಟು 40,504 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು 102 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 2,055 ಗೆ ಏರಿದೆ.

LEAVE A REPLY

Please enter your comment!
Please enter your name here