ಕೊರೋನಾ : ರಾಜ್ಯದಲ್ಲಿ 5,199 ಹೊಸ ಸೋಂಕಿತರ ವರದಿ!

0
69

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ರಾಜ್ಯದಲ್ಲಿಂದು 5,199 ಸೋಂಕಿತರು ವರದಿಯಾಗಿದೆ. ರಾಜ್ಯದಲ್ಲಿ ಸತತ ನಾಲ್ಕನೇ ದಿನ 24 ಗಂಟೆಯಲ್ಲಿ 5 ಸಾವಿರಕ್ಕೂ ಅಧಿಕ ಸೋಂಕಿತರ ಪತ್ತೆಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 96,141 ಕ್ಕೆ ಏರಿಕೆಯಾಗಿದ್ದು, 58,417 ಪ್ರಕರಣಗಳು ಸಕ್ರಿಯವಾಗಿದೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಇಂದಿನ 1,950 ಸೇರಿದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 33,156 ಗೆ ಏರಿದೆ. ದಕ್ಷಿಣ ಕನ್ನಡ (2,642) ಮತ್ತು ಬಳ್ಳಾರಿ (2,464) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, 1 ಜಿಲ್ಲೆಯಲ್ಲಿ 500ಕ್ಕೂ ಅಧಿಕ, 2 ಜಿಲ್ಲೆಗಳಲ್ಲಿ 200ಕ್ಕೂ ಅಧಿಕ ಮತ್ತು 11 ಇತರ ಜಿಲ್ಲೆಗಳಲ್ಲಿ 100ಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಬಳ್ಳಾರಿ 579, ಮೈಸೂರು 230, ಬೆಂಗಳೂರು ಗ್ರಾಮಾಂತರ 213, ದಕ್ಷಿಣ ಕನ್ನಡ 199, ಉಡುಪಿ 169, ಧಾರವಾಡ 165, ಹಾಸನ 164, ಬೆಳಗಾವಿ 163, ಕಲಬುರ್ಗಿ 152, ವಿಜಯಪುರ 132, ರಾಯಚೂರು 131 ಹೊಸ ಸೋಂಕಿತರ ವರದಿಯಾಗಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು ದಾಖಲೆಯ 2,088 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದುವರೆಗೆ, ಒಟ್ಟು 35,838 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು 82 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 1,878 ಗೆ ಏರಿದೆ.

LEAVE A REPLY

Please enter your comment!
Please enter your name here