ಕೊರೋನಾ: ರಾಜ್ಯವಾರು ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ ಕರ್ನಾಟಕ

0
73

ಕೊರೋನಾ ವಿಷಯದಲ್ಲಿ ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರು ಮತ್ತು ಮಾದರಿ ರಾಜ್ಯ ಕರ್ನಾಟಕದಲ್ಲಿ ಕಳೆದ ಒಂದೆರಡು ವಾರಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಬಹುತೇಕ ರಾಜ್ಯಗಳನ್ನು ಹಿಂದಿಕ್ಕಿರುವ ಕರ್ನಾಟಕ ರಾಷ್ಟ್ರದಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದು ತಲುಪಿದೆ.

ಇಂದು ಬೆಂಗಳೂರಿನ 1,267 ಸೇರಿದಂತೆ, ರಾಜ್ಯದಲ್ಲಿ ಸತತ ಏಳನೇ ದಿನ 2 ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಇಂದಿನ 2,496 ಸೇರಿ, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 44,077 ಗೆ ಏರಿಕೆಯಾಗಿದ್ದು, 25,839 ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗುತ್ತಿದ್ದು, ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,599 ಗೆ ಏರಿದೆ. ದಕ್ಷಿಣ ಕನ್ನಡ (1,511) ಮತ್ತು ಧಾರವಾಡ (770) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಅದಲ್ಲದೆ ರಾಜ್ಯ ರಾಜಧಾನಿದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 20,000 ದಾಟಿದ್ದು, ಹಲವರ ಸೋಂಕಿನ ಮೂಲವೇ ಸಿಗದಿರುವುದು ಸರ್ಕಾರಕ್ಕೆ ತಲೆ ನೋವುಂಟುಮಾಡಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ಮೈಸೂರು 125, ಕಲಬುರ್ಗಿ 121, ಧಾರವಾಡ 100 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು 1,142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 17,390 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು ದಾಖಲೆಯ 87 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಇದುವರೆಗೆ 842 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here