ಕೊರೋನಾ : ರಾಜ್ಯಾದ್ಯಂತ 5,503 ಸೋಂಕಿತರ ವರದಿ!

0
155
Tap to know MORE!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಇತ್ತೀಚೆಗೆ ಪ್ರತಿದಿನ 4-5 ಸಾವಿರ ಹೊಸ ಸೋಂಕಿತರ ವರದಿಯಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದ್ದು, ಇದನ್ನು ತಲುಪಿದ ಕೇವಲ ಐದನೇ ರಾಜ್ಯವಾಗಿದೆ. (ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಆಂಧ್ರಪ್ರದೇಶ ಮೊದಲ ನಾಲ್ಕು ರಾಜ್ಯಗಳು)

ರಾಜ್ಯದಲ್ಲಿಂದು 5,503 ಸೋಂಕಿತರು ವರದಿಯಾಗಿದೆ. ರಾಜ್ಯದಲ್ಲಿ ಸತತ ಏಳನೇ ದಿನ 24 ಗಂಟೆಯಲ್ಲಿ 5 ಸಾವಿರಕ್ಕೂ ಅಧಿಕ ಸೋಂಕಿತರ ಪತ್ತೆಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1,12,504 ಗೆ ಏರಿಕೆಯಾಗಿದ್ದು, 67,448 ಪ್ರಕರಣಗಳು ಸಕ್ರಿಯವಾಗಿದೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಇಂದಿನ 2,240 ಸೇರಿದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 36,224 ಗೆ ಏರಿದೆ. ಬಳ್ಳಾರಿ (3,417) ಮತ್ತು ದಕ್ಷಿಣ ಕನ್ನಡ  (2,725) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, 5 ಜಿಲ್ಲೆಗಳಲ್ಲಿ 200ಕ್ಕೂ ಅಧಿಕ ಮತ್ತು 6 ಇತರ ಜಿಲ್ಲೆಗಳಲ್ಲಿ 100ಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಬಳ್ಳಾರಿ 338, ಬೆಳಗಾವಿ 279, ದಾವಣಗೆರೆ 225, ದಕ್ಷಿಣ ಕನ್ನಡ 208, ಮೈಸೂರು 200, ಧಾರವಾಡ 175, ಉಡುಪಿ 173, ಕಲಬುರ್ಗಿ 168, ಶಿವಮೊಗ್ಗ 131, ತುಮಕೂರು 128, ಯಾದಗಿರಿ 114 ಹೊಸ ಸೋಂಕಿತರ ವರದಿಯಾಗಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು ಒಟ್ಟು 2,397 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದುವರೆಗೆ, ಒಟ್ಟು 42,901 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು 92 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 2,147 ಗೆ ಏರಿದೆ.

LEAVE A REPLY

Please enter your comment!
Please enter your name here