ಕೊರೋನಾ : ರಾಜ್ಯಾದ್ಯಂತ 70 ಸಾವಿರ ದಾಟಿದ ಸೋಂಕಿತರ ಸಂಖ್ಯೆ ; 25 ಸಾವಿರಕ್ಕೂ ಅಧಿಕ ಗುಣಮುಖ

0
149
Tap to know MORE!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಪ್ರತಿದಿನವೂ ಸಹಸ್ರಾರು ಸಂಖ್ಯೆಯಲ್ಲಿ ಸೋಂಕಿತರ ವರದಿಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಇಂದು, 1,714 ಹೊಸ ಸೋಂಕಿತರ ವರದಿಯಾಗಿದೆ. ಇದನ್ನೂ ಸೇರಿದಂತೆ, ರಾಜ್ಯದಲ್ಲಿಂದು 3,649 ಸೋಂಕಿತರು ದಾಖಲಾಗಿದ್ದಾರೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 71,069 ಕ್ಕೆ ಏರಿಕೆಯಾಗಿದ್ದು, 44,140 ಪ್ರಕರಣಗಳು ಸಕ್ರಿಯವಾಗಿದೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಇಂದಿನ 1,714 ಸೇರಿದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 26,746 ಗೆ ಏರಿದೆ. ದಕ್ಷಿಣ ಕನ್ನಡ (2,574) ಮತ್ತು ಧಾರವಾಡ (1,544) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, 7 ಇತರ ಜಿಲ್ಲೆಗಳಲ್ಲಿ 100ಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಬಳ್ಳಾರಿ 193, ದಕ್ಷಿಣ ಕನ್ನಡ 149 ,ಮೈಸೂರು 135, ಯಾದಗಿರಿ 117, ಉತ್ತರ ಕನ್ನಡ 109, ಹಾಸನ 107, ಕೋಲಾರ 103 ಸೋಂಕಿತರ ವರದಿಯಾಗಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು ದಾಖಲೆಯ 1,664 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದುವರೆಗೆ, ಒಟ್ಟು 25,459 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು 61 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 1,403 ಗೆ ಏರಿದೆ

LEAVE A REPLY

Please enter your comment!
Please enter your name here