ಭಾರತದಲ್ಲಿ ಶೇ.90 ಕೊರೋನಾ ಸೋಂಕಿತರು ಗುಣಮುಖ

0
134
Tap to know MORE!

ನವದೆಹಲಿ, ಅ.25: ಭಾರತದಲ್ಲಿ 100 ಮಂದಿ ಕೊವಿಡ್-19 ಸೋಂಕಿತರ ಪೈಕಿ 90 ಮಂದಿ ಗುಣಮುಖರಾಗಿರುವುದು ಅಂಕಿ-ಅಂಶಗಳ ಸಮೇತ ಸಾಬೀತಾಗಿದೆ. ಕಳೆದ 24 ಗಂಟೆಗಳಲ್ಲೇ 62,077 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಹೊಸ ಪ್ರಕರಣಗಳ ಜೊತೆಗೆ ಸಾವಿನ ಪ್ರಮಾಣವೂ ಕಡಿಮೆ ಆಗಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಒಟ್ಟು 78,64,811ಸೋಂಕಿತ ಪ್ರಕರಣಗಳ ಪೈಕಿ 70,78,123 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 6,68,154 ಸಕ್ರಿಯ ಪ್ರಕರಣಗಳಿವೆ. ಕಳೆದ ಅಕ್ಟೋಬರ್ 02 ರಿಂದ ಸಾವಿನ ಪ್ರಮಾಣದಲ್ಲೂ ಭಾರಿ ಇಳಿಕೆ ಕಂಡು ಬಂದಿದೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

24 ಕಳೆದ ಗಂಟೆಗಳಲ್ಲಿ 50,129 ಹೊಸ ಕೊವಿಡ್-19 ಪ್ರಕರಣ:

ಭಾರತದಲ್ಲಿ ಒಂದೇ ದಿನ 50,129 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 78,64,811ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಂದೇ ದಿನ 578 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 1,18,534ಕ್ಕೆ ಏರಿಕೆಯಾಗಿದೆ. ಕಳೆದ 15 ದಿನಗಳಿಂದ ಸಾವಿನ ಸಂಖ್ಯೆ 1000ಕ್ಕಿಂತ ಕಡಿಮೆಯಾಗಿದ್ದು, ಸಾವಿನ ಪ್ರಮಾಣವೂ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

LEAVE A REPLY

Please enter your comment!
Please enter your name here