ನವದೆಹಲಿ : ದೇಶದ ಮೊದಲ ಕೊರೊನಾ ಲಸಿಕೆ ಕೋವಾಕ್ಸಿನ್ ಪ್ರಯೋಗದ ಮೊದಲ ಹಂತ ಪೂರ್ಣಗೊಂಡಿದೆ. ಭಾರತದಾದ್ಯಂತ 50 ಜನರಿಗೆ ಲಸಿಕೆ ನೀಡಲಾಯಿತು. ಫಲಿತಾಂಶಗಳು ಪರಿಣಾಮಕಾರಿಯಾಗಿದೆ ಎಂದು ಪಿಜಿಐ ರೋಥಕ್ ನ ಲಸಿಕೆ ಪ್ರಯೋಗ ತಂಡದ ಪ್ರಧಾನ ತನಿಖಾಧಿಕಾರಿ ಡಾ.ಸವಿತಾ ವರ್ಮಾ ಹೇಳಿದ್ದಾರೆ.
ಎರಡನೇ ಹಂತದಲ್ಲಿ ಶನಿವಾರ ಆರು ಜನರಿಗೆ ಲಸಿಕೆ ನೀಡಲಾಗಿದೆ.
ಕೊರೋನವೈರಸ್ ಪ್ರಕರಣಗಳು ಪ್ರಪಂಚದಾದ್ಯಂತ ಹೆಚ್ಚಾಗುತ್ತಿರುವುದರಿಂದ, ವೈರಸ್ ನಿಯಂತ್ರಣ ಅದರ ವಿರುದ್ಧದ ಲಸಿಕೆಯಿಂದ ಮಾತ್ರ ಸಾಧ್ಯವಾಗುತ್ತಿದೆ ಎನ್ನಲಾಗಿದೆ.
ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ಶುಕ್ರವಾರ 30 ವರ್ಷದ ವ್ಯಕ್ತಿಯೊರವರಿಗೆ ಕೋವಿಡ್ -19 ಲಸಿಕೆ ಕೊವಾಕ್ಸಿನ್ ನೀಡಲಾಯಿತು.
ವಿಚಾರಣೆಯ ತನಿಖಾಧಿಕಾರಿಗಳಲ್ಲಿ ಓರ್ವ ಮತ್ತು ಏಮ್ಸ್ ಸಮುದಾಯ ಔಷಧದ ಪ್ರಾಧ್ಯಾಪಕ ಡಾ. ಪುನೀತ್ ಮಿಶ್ರಾ ಅವರು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ವ್ಯಕ್ತಿಯ ದೇಹದ ಮೇಲೆ ಲಸಿಕೆಯ ವ್ಯತಿರಿಕ್ತ ಪ್ರತಿಕ್ರಿಯೆಯನ್ನು ಪರೀಕ್ಷಿಸಲು ಆರಂಭಿಕ ಎರಡು ಗಂಟೆಗಳ ಕಾಲ ಗಮನಿಸಲಾಯಿತು ಎಂದು ತಿಳಿಸಿದ್ದಾರೆ.
ಐಸಿಎಂಆರ್ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ) ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಈ ಲಸಿಕೆಯನ್ನು ದೇಶದಾದ್ಯಂತ ಮೂರು ವೈದ್ಯಕೀಯ ಸಂಸ್ಥೆಗಳಲ್ಲಿ ಕ್ಲಿನಿಕಲ್ ಟ್ರಯಲ್ ಹಂತ 1 ಸುತ್ತಿನಲ್ಲಿ ನಡೆಸಲಾಗುತ್ತಿದೆ.
ಕೆಲವು ದಿನಗಳ ಹಿಂದೆ ಕೋವ್ಯಾಕ್ಸಿನ್ ಲಸಿಕೆಯನ್ನು ಮಾನವನ ಮೇಲಿನ ಪ್ರಯೋಗಗಳನ್ನು ಪ್ರಾರಂಭಿಸಿದ ನಂತರ ಇತರ ಎರಡು ಸಂಸ್ಥೆಗಳು ಏಮ್ಸ್ ಪಾಟ್ನಾ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಪಿಜಿಐಎಂಎಸ್) ರೋತಕ್, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆಯ್ಕೆ ಮಾಡಿದ ದೇಶದ ಇತರ ಒಂಬತ್ತು ವೈದ್ಯಕೀಯ ಸಂಸ್ಥೆಗಳಿಗೆ ಮಾನವ ಪ್ರಯೋಗಗಳನ್ನು ಪ್ರಾರಂಭಿಸಲಾಗುವುದು ಎನ್ನಲಾಗಿದೆ.
[…] […]