ಮಂಗಳೂರು ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ್ಯ” ಹೆಸರಿಡುವಂತೆ ವಿಧಾನಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಪ್ರಸ್ತಾಪ

0
214
Tap to know MORE!

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರಿಟ್ಟ ವಿಚಾರವನ್ನು ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಇಂದು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ವಿಮಾನ ನಿಲ್ದಾಣ ಎಂದು ಹೆಸರಿಡಬೇಕೆಂದು, ಕೋಟಿ ಚೆನ್ನಯ್ಯ ಹೆಸರನ್ನೇ ಕೇಂದ್ರಕ್ಕೆ ಶಿಫಾರಸು ಮಾಡಲು ಶಾಸಕ ಉಮಾನಾಥ್ ಕೋಟ್ಯಾನ್ ಆಗ್ರಹಿಸಿದರು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಉಮಾನಾಥ ಕೋಟ್ಯಾನ್ ತುಳುನಾಡಿನ ಕಾರ್ಣಿಕ ಪುರುಷರಾದ ಕೋಟಿ ಚೆನ್ನಯರನ್ನು ದೇಶ ವಿದೇಶಗಳಲ್ಲಿ ಆರಾಧ್ಯ ದೈವವಾಗಿ ಪೂಜಿಸಲ್ಪಡುತ್ತಿದ್ದಾರೆ ಅಲ್ಲದೆ ಕರ್ನಾಟಕ, ಕೇರಳ, ಹಾಗೂ ಮಹಾರಾಷ್ಟ್ರಗಳಲ್ಲೂ ಅಸಂಖ್ಯಾತ ಜನ ಕೋಟಿ ಚೆನ್ನಯರನ್ನು ಆರಾಧಿಸುತ್ತಾರೆ ಹೊರ ರಾಜ್ಯಗಳಲ್ಲೂ 260ಕ್ಕೂ ಮಿಕ್ಕಿ ಕೋಟಿ ಚೆನ್ನಯರ ಹೆಸರಿನಲ್ಲಿ ಗರಡಿಗಳಿವೆ.

ಈಗಾಗಲೇ ಕೋಟಿ ಚೆನ್ನಯ ಹೆಸರಿಡುವಂತೆ ಒತ್ತಾಯಿಸಿ ಕರಾವಳಿ ಜಿಲ್ಲೆಗಳಲ್ಲಿ ಪ್ರತಿಭಟನೆ ಬೈಕ್ ರಾಲಿಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಪ್ರಸ್ತಾಪಿಸಿದರು.

ಈ ಹಿನ್ನೆಲೆಯಲ್ಲಿ ಈ ಆಧುನಿಕ ಕಾಲದಲ್ಲಿ ಈ ಕಾರ್ಣಿಕ ಪುರುಷರ ಹೆಸರು ಅಜರಾಮರವಾಗಿ ಉಳಿಯುವ ನಿಟ್ಟಿನಲ್ಲಿ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ವೀರ ಪುರುಷ ಕೋಟಿ ಚೆನ್ನಯ” ಅಂತ ರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರಿಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here