ಕೋವಿಡ್-19: ದೇಶದಲ್ಲಿ 5ನೇ ಸ್ಥಾನಕ್ಕೇರಿದ ಕರ್ನಾಟಕ!

0
61

ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ರಾಜ್ಯವಾರು ಪಟ್ಟಿಯಲ್ಲಿ 5ನೇ ಸ್ಥಾನ ತಲುಪಿದೆ.

ಇಂದು ಬೆಂಗಳೂರಿನ 1,525 ಸೇರಿದಂತೆ, ರಾಜ್ಯದಲ್ಲಿ ಸತತ ಐದನೇ ದಿನ 2 ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಇಂದಿನ 2,627 ಸೇರಿ, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 38,843 ಗೆ ಏರಿಕೆಯಾಗಿದ್ದು, 22,746 ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗುತ್ತಿದ್ದು, ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,067 ಗೆ ಏರಿದೆ. ದಕ್ಷಿಣ ಕನ್ನಡ (1,419) ಮತ್ತು ಧಾರವಾಡ (673) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಅದಲ್ಲದೆ ರಾಜ್ಯ ರಾಜಧಾನಿದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 18,000 ದಾಟಿದ್ದು, ಹಲವರ ಸೋಂಕಿನ ಮೂಲವೇ ಸಿಗದಿರುವುದು ಸರ್ಕಾರಕ್ಕೆ ತಲೆ ನೋವುಂಟುಮಾಡಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡದಲ್ಲಿ 196, ಧಾರವಾಡ 129 ಮತ್ತು ಯಾದಗಿರಿ 120 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು 693 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 15,409 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು ದಾಖಲೆಯ 71 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಇದುವರೆಗೆ 684 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here