ಕೋವಿಡ್-19: ಭಾರತಕ್ಕೆ ₹135 ಕೋಟಿ ನೆರವು ನೀಡುವುದಾಗಿ ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ

0
164
Tap to know MORE!

ವಾಷಿಂಗ್ಟನ್, ಏಪ್ರಿಲ್ 26: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ 135 ಕೋಟಿ ರೂ. ನೆರವು ನೀಡಲು ಗೂಗಲ್ ಸಿಇಒ ಸುಂದರ್ ಪಿಚೈ ನಿರ್ಧರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಂದರ್ ಪಿಚೈ ಅವರು, ಭಾರತದಲ್ಲಿನ ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ನೋಡಿ ಮನಸ್ಸು ಒಡೆದುಹೋದಂತಾಗಿದೆ. ಗೂಗಲ್ ಈ ಕೂಡಲೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯ ಮಾಡುವ ಉದ್ದೇಶದಿಂದ 135 ಕೋಟಿ ರೂ ಅನುದಾನ ನೀಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೇ – ಜೂನ್ ತಿಂಗಳಿನಲ್ಲಿ ಉಚಿತ ಆಹಾರ ಧಾನ್ಯ ವಿತರಣೆ : ಘೋಷಣೆ ಮಾಡಿದ ಕೇಂದ್ರ ಸರ್ಕಾರ

ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಕುರಿತು ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಟ್ವೀಟ್ ಮಾಡಿದ ಬೆನ್ನಲ್ಲೇ ಗೂಗಲ್ ಸಿಇಒ ಭಾರತ ಮೂಲದ ಸುಂದರ್ ಪಿಚೈ ಅವರೂ ಕೂಡ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ದೇಶಾದ್ಯಂತ ಚಿಕಿತ್ಸೆಗಾಗಿ ಸೋಂಕಿತರು ಪರದಾಡುತ್ತಿದ್ದು, ಹಲವಾರು ಆಸ್ಪತ್ರೆಗಳ ಬೆಡ್‌ಗಳು ಸಂಪೂರ್ಣ ಭರ್ತಿಯಾಗಿದೆ. ಬೆಡ್‌ಗಳಿಲ್ಲದೆ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದಾರೆ. ಅಂತೆಯೇ ಇತ್ತ ಅಸ್ಪತ್ರೆಗೆ ದಾಖಲಾದ ಸೋಂಕಿತರೂ ಕೂಡ ಆಮ್ಲಜನಕ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದು, ಸಾಕಷ್ಟು ರೋಗಿಗಳು ಆಮ್ಲಜನಕ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ.

LEAVE A REPLY

Please enter your comment!
Please enter your name here