ಹಳೆಯಂಗಡಿ: ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ

0
174
Tap to know MORE!

ಹಳೆಯಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ – 19 ಖಚಿತ ಪ್ರಕರಣಗಳ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇದರ ಸೂಚನೆಯ ಮೇರೆಗೆ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಯು ನಿರಂತರವಾಗಿ ನಡೆಯುತ್ತಿದೆ.

ಅದರಂತೆಯೇ, ಮಂಗಳೂರು ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ವತಿಯಿಂದ, ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಬಂಧುಗಳಿಗೆ ಉಚಿತ ಕೋವಿಡ್ ಪರೀಕ್ಷೆಯನ್ನು ಅಕ್ಟೋಬರ್ 3 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ವಠಾರದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ವಿನೋದ್ ಕುಮಾರ್ ಬೊಳ್ಳುರು, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಜೀವನ್ ಪ್ರಕಾಶ್ ಕಾಮೆರೊಟ್ಟು, ಮೂಲ್ಕಿ ಹೋಬಳಿಯ ತಹಸಿಲ್ದಾರರು ಮತ್ತು ಹಳೆಯಂಗಡಿ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿ ಶ್ರೀ ಎನ್. ಮಾಣಿಕ್ಯ, ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರಿ ಪೂರ್ಣಿಮಾ ಮತ್ತು ಸಿಬ್ಬಂದಿ ವರ್ಗ,ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಇದರ ಪ್ರಯೋಗಾಲಯ ತಂತ್ರಜ್ಞರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕರು, ಯುವಕ ಮಂಡಲದ ಅಧ್ಯಕ್ಷರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು

LEAVE A REPLY

Please enter your comment!
Please enter your name here