ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ವಕ್ತಾರೆ ಖುಷ್ಬೂ ಸುಂದರ್!

0
161
Tap to know MORE!

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಂತೆಯೇ ನಟಿ ಖುಷ್ಬೂ ಸುಂದರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ಸಿನ ಪ್ರಮುಖ ವಕ್ತಾರರಲ್ಲಿ ಒಬ್ಬರಾದ ನಟಿ-ರಾಜಕಾರಣಿ ಖುಷ್ಬು ಸುಂದರ್ ಅವರು ಇಂದು ಕಾಂಗ್ರೆಸ್ ಪಕ್ಷವನ್ನು ತೊರೆದು, ಬಿಜೆಪಿಗೆ ಸೇರಿದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರದಲ್ಲಿ, “ನೆಲದ ವಾಸ್ತವತೆಯೊಂದಿಗೆ ಯಾವುದೇ ಸಂಬಂಧವಿಲ್ಲದ ಜನರಿಂದ ತಳ್ಳಲ್ಪಟ್ಟಿದ್ದೇನೆ ಮತ್ತು ನಿಗ್ರಹಿಸಲ್ಪಟ್ಟಿದ್ದೇನೆ” ಎಂದು ಅವರು ಬರೆದಿದ್ದಾರೆ.

“ರಾಷ್ಟ್ರವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ನಮಗೆ ಪ್ರಧಾನಿ ನರೇಂದ್ರ ಮೋದಿಯಂತಹ ನಾಯಕರು ಬೇಕು” ಎಂದು ಖುಷ್ಬೂ ಸುಂದರ್ ಬಿಜೆಪಿಗೆ ಸೇರಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿಯ ಕೇಂದ್ರ ಕಚೇರಿಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ , ಅಧಿಕೃತವಾಗಿ ಪಕ್ಷದ ಸದಸ್ಯತ್ವವನ್ನು ನೀಡುವ ಮೂಲಕ ಖುಷ್ಬೂ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here