ಮಗು ಗಂಡೋ ಹೆಣ್ಣೋ ಎಂದು ತಿಳಿಯಲು ತುಂಬು ಗರ್ಭಿಣಿ ಪತ್ನಿಯ ಹೊಟ್ಟೆ ಸೀಳಿದ ಪತಿ!

0
98

ಉತ್ತರ ಪ್ರದೇಶ: ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ಪತಿ, ಮಗು ಯಾವುದೆಂದು ತಿಳಿಯಲು ತನ್ನ ತುಂಬು ಗರ್ಭಿಣಿ ಪತ್ನಿಯ ಹೊಟ್ಟೆಯನ್ನು ಸೀಳಿದ ಪೈಶಾಚಿಕ ಘಟನೆ ಶನಿವಾರ ಸಂಜೆ ನಡೆದಿದೆ. ಐದು ಹೆಣ್ಣುಮಕ್ಕಳನ್ನು ಹೆತ್ತಿದ್ದ ಪತ್ನಿ, ಈ ಬಾರಿಯಾದರೂ ಗಂಡುಮಗುವಿಗೆ ಜನ್ಮ ನೀಡುತ್ತಾಳೆಯೇ ಎಂದು ತಿಳಿದುಕೊಳ್ಳಲು ಹೀಗೆ ಮಾಡಿದ್ದಾರೆ ಎಂದಿದ್ದಾರೆ.

ನೆಕ್‌ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪನ್ನಾಲಾಲ್, ಹರಿತವಾದ ಆಯುಧದಿಂದ ಪತ್ನಿಯ ಹೊಟ್ಟೆ ಸೀಳಿದ್ದಾನೆ. 35 ವರ್ಷದ ಮಹಿಳೆ ತೀವ್ರ ಗಾಯಗೊಂಡಿದ್ದಾರೆ ಎಂದು ಎಸ್ಪಿ ಪ್ರವೀಣ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಪತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಪತ್ನಿಯ ಹೊಟ್ಟೆಯಲ್ಲಿ ಬೆಳೆಯುತ್ತಿರುವುದು ಹೆಣ್ಣುಮಗುವೇ ಅಥವಾ ಗಂಡುಮಗುವೇ ಎಂದು ತಿಳಿದುಕೊಳ್ಳಲು ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಮಹಿಳೆಯ ಕುಟುಂಬದವರು ದೂರಿದ್ದಾರೆ. ಸ್ಥಳೀಯರು ಮಹಿಳೆಯ ನೆರವಿಗೆ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮಹಿಳೆ ಏಳು ತಿಂಗಳ ಗರ್ಭಿಣಿ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here