
ಮಂಗಳೂರು ಡಿ.15: ವಿಧಾನ ಪರಿಷತ್ ನಲ್ಲಿ ಸಭಾಪತಿಗಿಂತ ಮೊದಲು ಉಪಸಭಾಪತಿ ಬಂದು ಕುಳಿತುಕೊಂಡ ಕಾರಣಕ್ಕೆ ಗಲಾಟೆ ನಡೆದಿದೆ. ಎರಡು ಪಕ್ಷಗಳ ನಡುವೆ ಜೋರು ಗಲಾಟೆ ನಡೆದಿದೆ. ಈ ಗಲಾಟೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನಾಯಕರು ವಿಧಾನ ಸಭೆ, ವಿಧಾನ ಪರಿಷತ್ತಿನ ಹೊರಗೆ ಗೂಂಡಾಗಿರಿ ಮಾಡುತ್ತಿದ್ದರು. ಇದೀಗ ಒಳಗೂ ಗೂಂಡಾಗಿರಿ ಪ್ರದರ್ಶಿಸಿದೆ. ಈ ರೀತಿ ಗಲಾಟೆ ಮಾಡುವ ಮೂಲಕ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೋಲೆ. ವಿಧಾನ ಪರಿಷತ್ ಇತಿಹಾಸ ಪರಂಪರೆಗೆ ಕಳಂಕ ತಂದಿದೆ ಎಂದು ನಳೀನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವೇ ಇಲ್ಲ : ಸಚಿವ ಲಕ್ಷ್ಮಣ ಸವದಿ
ಇಂದು ಇತಿಹಾಸದಲ್ಲೇ ನಡೆಯದ ಘಟನೆಗೆ ವಿಧಾನ ಪರಿಷತ್ ಸಾಕ್ಷಿಯಾಗಿದೆ. ಸಭಾಪತಿ ಪ್ರತಾಪ್ ಚಂದ್ರ ವಿರುದ್ಧ ಬಿಜೆಪಿ ಕಳೆದ ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರನ್ನು ಬಿಜೆಪಿಯವರು ಸಭಾಪತಿ ಸ್ಥಾನಕ್ಕೆ ಎಳೆದು ತಂದು ಕೂರಿಸಿದ್ರು. ಈ ವೇಳೆ ವಿರೋಧ ವ್ಯಕ್ತಪಡಿಸಿ ಮುತ್ತಿಗೆ ಹಾಕಿದ್ರು. ಸಭಾಪತಿ ಸ್ಥಾನದಲ್ಲಿ ಕುಳಿತ ಧರ್ಮೇಗೌಡರನ್ನು ಕಾಂಗ್ರೆಸ್ ಸದಸ್ಯರು ಹಿಡಿದೆಳೆದು ಪೀಠದಿಂದ ಕಳಕ್ಕಿಳಿಸಿದ್ದು, ಸಭಾಪತಿ ಸ್ಥಾನದಲ್ಲಿ ಅಳವಡಿಸಲಾಗಿದ್ದ ಗಾಜಿನ ತಡೆಯನ್ನು ಕಿತ್ತೆಸೆದರು.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ರಾಷ್ಟ್ರೀಯ ಶಿಕ್ಷಣ ನೀತಿ – 2020ನ್ನು ಜಾರಿಗೊಳಿಸುವ ಮೊದಲ ರಾಜ್ಯವಾಗಲಿದೆ ಕರ್ನಾಟಕ : ಸಿಎಂ ಯಡಿಯೂರಪ್ಪ