ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಿಸಲು ₹15 ಕೋಟಿ ಬಿಡುಗಡೆ: ಸಚಿವ ಬೊಮ್ಮಾಯಿ

0
191
Tap to know MORE!

ಬೆಂಗಳೂರು: ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಗೋಶಾಲೆಯನ್ನು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

(Karnataka government to release 15 crore rupees for the construction of Goshalas in every district of the state, says minister Basavaraja Bommai)

ಗೋ ಹತ್ಯೆ ನಿಷೇಧ ಮಸೂದೆ | 13 ವರ್ಷ ಮೇಲ್ಪಟ್ಟ ಅಥವಾ ಅನಾರೋಗ್ಯ ಪೀಡಿತ ಜಾನುವಾರುಗಳ ಹತ್ಯೆಗೆ ಅವಕಾಶ!

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿಯವರು, ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 15 ಕೋಟಿ ಬಿಡುಗಡೆ ಮಾಡಲಾಗುವುದು. ಇನ್ನುಳಿದ ಹಣವನ್ನು ಅಗತ್ಯಕ್ಕೆ ತಕ್ಕಂತೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ರಾಜ್ಯದಲ್ಲಿ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲಾಗಿದೆ. ಕಾಯ್ದೆ ಮೂಲಕ ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here