BREAKING| ಗೋಹತ್ಯೆ ನಿಷೇಧ ವಿಧೇಯಕವನ್ನು ಮಂಡಿಸಿದ ರಾಜ್ಯ ಸರ್ಕಾರ!

0
108
Tap to know MORE!

ಬೆಂಗಳೂರು: ರಾಜ್ಯ ಸರ್ಕಾರ ಬಹು ನಿರೀಕ್ಷಿತ ಗೋಹತ್ಯೆ ನಿಷೇಧ ವಿಧೇಯಕ‌ವನ್ನು ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡನೆ ಮಾಡಿದೆ. ಅದರಂತೆ ಶೀಘ್ರದಲ್ಲೇ ಗೋಹತ್ಯೆ ನಡೆಸುವವರ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವುದಾಗಿಯೂ ಸರ್ಕಾರ ಇದೇ ಸಂದರ್ಭದಲ್ಲಿ ತಿಳಿಸಿದೆ.

ಈ ಬಾರಿಯ ಚಳಿಗಾಲದ ಅಧಿವೇಶನ‌ದಲ್ಲಿ ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವುದಾಗಿ ಈ ಹಿಂದೆಯೇ ರಾಜ್ಯ ಸರ್ಕಾರದ ವಿವಿಧ ಮೂಲಗಳು ತಿಳಿಸಿದ್ದವು. ಜೊತೆಗೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಉತ್ತರ ಪ್ರದೇಶ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ‌ಯ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ನಡೆಸಿದ್ದರು.

ಇದೀಗ ಗೋಹತ್ಯೆ ನಿಷೇಧ ಕಾಯ್ದೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ನುಡಿದಂತೆ ನಡೆದಿದ್ದು, ಆ ಮೂಲಕ ಬಹುಸಂಖ್ಯಾತ‌ರ ಭಾವನೆಗಳಿಗೆ ಗೌರವ ಸಲ್ಲಿಸುವ ಕೆಲಸವನ್ನು ಮಾಡಿದೆ.

LEAVE A REPLY

Please enter your comment!
Please enter your name here