ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ : ಸಚಿವ ಪ್ರಭು ಚೌಹಾಣ್

0
92
Tap to know MORE!

ಬೆಂಗಳೂರು: ಡಿಸೆಂಬರ್ 7ರಿಂದ ಪ್ರಾರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ಹಾಗೂ ಸಮಗ್ರ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.

ಇದನ್ನೂ ಓದಿ: ಲವ್‌ ಜಿಹಾದ್‌, ಡ್ರಗ್ಸ್‌ ಮಾಫಿಯಾ ಮಟ್ಟ ಹಾಕಲು ಕಠಿಣ ಕ್ರಮ : ಮುಖ್ಯಮಂತ್ರಿ ಯಡಿಯೂರಪ್ಪ

ಗೋಹತ್ಯೆ ನಿಷೇಧ ಮಸೂದೆಯನ್ನು 2010ರಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ, ಆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಿರಸ್ಕರಿಸಿತ್ತು.

ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಬದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದರು.

LEAVE A REPLY

Please enter your comment!
Please enter your name here