“ಗೋ ಕೊರೋನಾ, ಕೊರೋನಾ ಗೋ” ಜಪಿಸಿದ್ದ ಕೇಂದ್ರ ಸಚಿವ ರಾಮದಾಸ್ ಅಥಾವಳೆಗೆ ಕೊರೋನಾ!

0
265
Tap to know MORE!

ಮುಂಬೈ: ಕೇಂದ್ರ ಸಚಿವ ರಾಮದಾಸ್ ಅಥಾವಳೆಯವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ “ಗೋ ಕೊರೋನಾ, ಕರೋನಾ ಗೋ” ಪಠಣವು ಭಾರೀ ಚರ್ಚೆಗೆ ಕಾರಣವಾಗಿತ್ತು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಪಕ್ಷದ ನಾಯಕ ಅಥಾವಳೆಯವರನ್ನು ದಕ್ಷಿಣ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಫೆಬ್ರವರಿ ತಿಂಗಳಲ್ಲಿ ಕೆಲವು ಸನ್ಯಾಸಿಗಳೊಂದಿಗೆ, ಒಂದು ಪ್ರಾರ್ಥನಾ ಸಭೆಯಲ್ಲಿ “ಗೋ ಕೊರೋನಾ, ಕೊರೋನಾ ಗೋ” ಎಂದು ಜಪಿಸುತ್ತಿದ್ದ ಅಥಾವಳೆ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

60 ವರ್ಷದ ಅಥಾವಳೆಯವರು ರಾಜ್ಯಸಭಾ ಸದಸ್ಯರಾಗಿದ್ದು, ಕೇಂದ್ರ ಸಾಮಾಜಿಕ ನ್ಯಾಯದ ರಾಜ್ಯ ಸಚಿವರಾಗಿದ್ದಾರೆ.

LEAVE A REPLY

Please enter your comment!
Please enter your name here