ರಾಜ್ಯದ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ಘೋಷಣೆ | ಎರಡು ಹಂತದಲ್ಲಿ ಮತದಾನ | ಇಂದಿನಿಂದಲೇ ನೀತಿ ಸಂಹಿತೆ ಜಾರಿ

0
351
Tap to know MORE!

ಬೆಂಗಳೂರು : ಕರ್ನಾಟಕ ರಾಜ್ಯದ 5764 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆಯಾಗಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುತ್ತಿದೆ ಎಂಬುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಈ ಬಾರಿ ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಒಂದು ಸಾವಿರ ಮತದಾರರಿಗೆ ಒಂದು ಮತಗಟ್ಟೆ ಸ್ಥಾಪಿಸಲಾಗಿದೆ. ಡಿಸೆಂಬರ್ 22ರಂದು ಮೊದಲನೇ ಹಂತದಲ್ಲಿ ಚುನಾವಣೆ ನಡೆದ್ರೇ, ಎರಡನೇ ಹಂತದಲ್ಲಿ ಡಿಸೆಂಬರ್ 27, 2020ಕ್ಕೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಮುಖ್ಯಸ್ಥರು ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 5764 ಗ್ರಾಮ ಪಂಚಾಯ್ತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಿಗದಿ ಪಡಿಸಲಾಗಿದೆ. ಮೊದಲ ಹಂತದ ಚುನಾವಣೆಗೆ ಅಧಿಸೂಚನೆ 7-12-2020ರಿಂದ ಆರಂಭಗೊಂಡರೇ ಎರಡನೇ ಹಂತದಲ್ಲಿ 11-12-2020ರಿಂದ ಆರಂಭಗೊಳ್ಳಲಿದೆ.

ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ಮತ್ತು ಜಿಲ್ಲಾವಾರು ವಿವರಗಳಿಗೆ : ಗ್ರಾಮ ಪಂಚಾಯತ್ ಚುನಾವಣೆ

 

ಮೊದಲ ಹಂತದ ಗ್ರಾಮಪಂಚಾಯ್ತಿ ಚುನಾವಣೆಗೆ ಮತದಾನ ದಿನಾಂಕ 22-12-2020ರಂದು ನಡೆಯಲಿದೆ. ದಿನಾಂಕ 27-12-2020ರಂದು ಎರಡನೇ ಹಂತದ ಗ್ರಾಮ ಪಂಚಾಯ್ತಿಗಳಿಗೆ ಮತದಾನ ನಡೆಯಲಿದೆ. ಎರಡು ಹಂತದ ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಏಣಿಕೆ ದಿನಾಂಕ 30-12-2020ರಂದು ನಡೆಯಲಿದೆ.

ಮೊದಲ ಹಂತ:

ನಾಮಪತ್ರ ಸಲ್ಲಿಕೆ ಆರಂಭ- ಡಿ.7
ನಾಮಪತ್ರ ಸಲ್ಲಿಸಲು ಕೊನೆಯ ದಿನ- ಡಿ.11.
ಮತದಾನ- ಡಿ.22

ಎರಡನೇ ಹಂತ:

ನಾಮಪತ್ರ ಸಲ್ಲಿಕೆ ಆರಂಭ ಡಿ.11
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಡಿ.16
ಮತದಾನ: ಡಿ.27

ಮತ ಎಣಿಕೆ : ಡಿ.30

ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ರಾಜ್ಯದ 5,762 ಗ್ರಾಮ ಪಂಚಾಯಿತಿಗಳ 35, 884 ಕ್ಷೇತ್ರಗಳ 92,121 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮೊದಲ ಹಂತದಲ್ಲಿ 113 ತಾಲೂಕುಗಳ 2,930 ಹಾಗೂ 2ನೇ ಹಂತದಲ್ಲಿ 113 ತಾಲೂಕುಗಳ 2,832 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here