ಚಿಕ್ಕಮಗಳೂರು: ಕೊರೊನ ಸೋಂಕಿತ ಅಣ್ಣನನ್ನು ಕೊಚ್ಚಿ ಕೊಲೆಗೈದ ತಮ್ಮ..!

0
170
Tap to know MORE!

ಕಳಸ: ಮನೆಯ ಜಗುಲಿಯಲ್ಲಿ ಮಲಗಿದ್ದ ಕೊರೊನಾ ಸೋ‌ಂಕಿತ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ.

ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಈ ವೇಳೆ ತಾಯಿ ಕೂಗಾಡಿ ಅಕ್ಕಪಕ್ಕದವರನ್ನು ಕರೆದರೂ ಮಹಾವೀರ್‍ ಗೆ ಕೊರೊನಾ ಪಾಸಿಟಿವ್ ಇದ್ದ ಕಾರಣ ಜಗಳ ಬಿಡಿಸಲು ಯಾರೂ ಮುಂದೆ ಬರಲಿಲ್ಲ. ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here