ಚಿತ್ರದುರ್ಗ : ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರ ಅಣಕು ಶವಯಾತ್ರೆ!

0
183
Tap to know MORE!

ಚಿತ್ರದುರ್ಗ: ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಬಂದ್​ ನಡೆಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಳಲ್ಕೆರೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಅಣಕು ಶವಯಾತ್ರೆ ಮಾಡಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತ ಪಡಿಸುತ್ತಿರುವ ರೈತರು ಈ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ರೈತರ ಮೇಲೆ ಬರೆ ಎಳೆಯುತ್ತಿದೆ ಎಂದು ಆರೋಪಿಸಿದ್ದು, ತಕ್ಷಣ ಈ ರೈತವಿರೋಧಿ ನೀತಿಯನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here