ಚುನಾವಣೆ ನಡೆಸದೇ, ಅವಿರೋಧವಾಗಿ ಆಯ್ಕೆಯಾದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ : ಎಚ್ಚರಿಸಿದ ಆಯೋಗ

0
146
Tap to know MORE!

ದಾವಣಗೆರೆ: ಹಣ ನೀಡುವುದು, ಹರಾಜು ಮಾಡುವುದು ಸೇರಿ ಇತರೆ ವ್ಯವಹಾರಗಳ ಮೂಲಕ ಚುನಾವಣೆ ಪ್ರಕ್ರಿಯೆ ನಡೆಸದೇ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ಚುನಾವಣಾ ಆಯೋಗ ಎಚ್ಚರಿಸಿದೆ.

ರಾಜ್ಯದ ಹಲವು ಭಾಗಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜು ಕೂಗುವ ಮೂಲಕ ಕೊಂಡುಕೊಳ್ಳಲಾಗುತ್ತಿದೆ. ಊರಿಗೆ ಹಣ ನೀಡಿದವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುತ್ತಿದೆ. ಈ ಕುರಿತು ಜಾಗೃತಗೊಂಡಿರುವ ಚುನಾವಣಾ ಆಯೋಗ ಎಚ್ಚರಿಸಿದೆ.

ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಹರಾಜು ಮೂಲಕ ಖರೀದಿ ಮಾಡುವ ಇಲ್ಲವೇ ದೇವಾಲಯಕ್ಕೆ ಹಣ ನೀಡಿದಾಗ ಚುನಾವಣೆ ನಡೆಸದೇ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದರೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಚುನಾವಣಾ ಆಯೋಗ ಎಚ್ಚರಿಸಿದೆ.

LEAVE A REPLY

Please enter your comment!
Please enter your name here