“ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಬಹುಮಾನ”

0
128
Tap to know MORE!

ಮಂಗಳೂರು (ಫೆ.08): ಬಿಲ್ಲವ ಸಮುದಾಯ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್‌ ಅಧಿಕಾರಿ ಮುಖಕ್ಕೆ 3 ದಿನಗಳ ಒಳಗಾಗಿ ಯಾರಾದರೂ ಬಿಲ್ಲವ ಸಮುದಾಯದ ಯುವಕರು ಮಸಿ ಬಳಿದರೆ 1 ಲಕ್ಷ ಬಹುಮಾನ ನೀಡುವುದಾಗಿ ಮಾಜಿ ಕಾರ್ಪೊರೇಟರ್‌ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ಭಾನುವಾರ ಫೇಸ್ಬುಕ್‌ ಲೈವ್‌ನಲ್ಲಿ ಮಾತಾಡಿರುವ ಅವರು, ಮೂರು ದಿನಗಳ ಒಳಗಾಗಿ ಕೋಟಿ ಚೆನ್ನಯ್ಯರ ಗರಡಿಗೆ ಬಂದು ಕ್ಷಮೆ ಯಾಚನೆ ಮಾಡದಿದ್ದರೆ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ; ಭಯೋತ್ಪಾದಕರು! – ರಾಜ್ಯ ಕೃಷಿ ಸಚಿವರ ವಿವಾದಾತ್ಮಕ ಹೇಳಿಕೆ!

ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿಯವರಲ್ಲಿ ಅಧಿಕಾರಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಬಲ್ಲವ ಸಮುದಾಯದ ಬಗ್ಗೆ ಅವಹೇಳನ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here