ಜನತಾ ಕರ್ಫ್ಯೂ ಹಿನ್ನೆಲೆ: ಇಂಜಿನಿಯರಿಂಗ್, ಡಿಪ್ಲೊಮಾ, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದಕ್ಕೆ!

0
268
Tap to know MORE!

ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ‘ಕೊರೋನಾ ಕರ್ಫ್ಯೂ’ ಜಾರಿ ಹಿನ್ನಲೆಯಲ್ಲಿ‌ ನಾಳೆಯಿಂದ ನಡೆಯಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು; ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೊರೋನಾ ಕರ್ಫ್ಯೂ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ರಾತ್ರಿಯಿಂದ(ಎ.27) ಕರ್ನಾಟಕದಲ್ಲಿ ಜನತಾ ಕರ್ಫ್ಯೂ ಜಾರಿ | ಏನಿರುತ್ತೆ, ಏನಿರಲ್ಲ?

ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೋನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ವಿಟಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಏ.27ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ಮುಂಚಿತವಾಗಿ ಪ್ರಕಟಿಸಲಾಗುವುದು ಎಂದು ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಇ. ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here