ಜಮ್ಮು ಕಾಶ್ಮೀರ: 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ | ಕೇಂದ್ರ ತನಿಖಾ ತಂಡದಿಂದ ವಿಚಾರಣೆ

0
169
Tap to know MORE!

ಶ್ರೀನಗರ್: ಜಮ್ಮು ವಿಮಾನ ನಿಲ್ದಾಣದಲ್ಲಿ ಕೇವಲ ಐದು ನಿಮಿಷಗಳ ಅಂತರದಲ್ಲಿ ಸಂಭವಿಸಿದ ಎರಡು ಸ್ಫೋಟಗಳ ಬೆನ್ನಲ್ಲೇ ಡ್ರೋನ್ ದಾಳಿ ಬಗ್ಗೆ ಭಾರತೀಯ ವಾಯು ಪಡೆ ಸಿಬ್ಬಂದಿ ತನಿಖೆ ಶುರು ಮಾಡಿದ್ದಾರೆ.

ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರ ತಜ್ಞರು, ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸ್ವಿಸ್ ಬ್ಯಾಂಕ್| 2020ರಲ್ಲಿ ಭಾರತೀಯರ ಫಂಡ್ ₹20 ಸಾವಿರ ಕೋಟಿಗೆ ಏರಿಕೆ!

ಭಾನುವಾರ ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೇಂದ್ರ ತನಿಖಾ ತಂಡದಿಂದ ವಿಚಾರಣೆ:

ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದಿರುವ ಎರಡು ಸ್ಫೋಟಗಳ ಗಂಭೀರತೆಯನ್ನು ಅರಿತುಕೊಂಡು ಕೇಂದ್ರ ತನಿಖಾ ತಂಡವೇ ಪ್ರಕರಣದ ತನಿಖೆಗೆ ಮುಂದಾಗಿದೆ. ‘ವಾಯು ಪಡೆ ಮುಖ್ಯಸ್ಥ ಏರ್ ಮಾರ್ಷಲ್ ಹೆಚ್.ಎಸ್ ಅರೋರಾ ಮತ್ತು ಏರ್ ಮಾರ್ಷಲ್ ವಿಕ್ರಮ್ ಸಿಂಗ್ ಜೊತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಚರ್ಚೆ ನಡೆಸಿದ್ದು, ಇಬ್ಬರು ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾರೆ,’ ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here