ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ನೇಮಕ

0
142
Tap to know MORE!

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ, ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ಸರಕಾರ ನೇಮಿಸಿದೆ.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿ, ಮೂರು ಬಾರಿ ಕರ್ನಾಟಕ ಸರಕಾರದ ಸಚಿವರಾಗಿ ಕಾರ್ಯ ನಿರ್ವಹಿಸಿರುವ ಜಯಪ್ರಕಾಶ್ ಹೆಗ್ಡೆ ಅವರು ನಿಷ್ಕಳಂಕ ರಾಜಕಾರಣದಿಂದಾಗಿ ಪ್ರಸಿದ್ಧಿ ಗಳಿಸಿದ್ದರು.

ಇದನ್ನೂ ಓದಿ: ಬಳ್ಳಾರಿ ಜಿಲ್ಲೆ ವಿಭಜನೆ | ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ !

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಶಿಫಾರಸ್ಸಿನಂತೆ, ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಜಯಪ್ರಕಾಶ್ ಹೆಗ್ಡೆ ಅವರ ನೇಮಕಾತಿಯ ಆದೇಶ ಪತ್ರವನ್ನು ಹೊರಡಿಸಿದೆ.

ಉಡುಪಿಯ ಕುಂದಾಪುರ ತಾಲೂಕಿನ ಕೊರ್ಗಿಯಲ್ಲಿ ಜನಿಸಿದ ಕೆ. ಜಯಪ್ರಕಾಶ್ ಹೆಗ್ಡೆ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಹಾಗೂ ಮೀನುಗಾರಿಕಾ ಸಚಿವರಾಗಿ ಉತ್ತಮವಾದ ಕರ್ತವ್ಯ ನಿಭಾಯಿಸಿ ಜನರ ಪ್ರೀತಿ ಪಾತ್ರಕ್ಕೆ ಕಾರಣವಾಗಿದ್ದಾರೆ. ಎರಡು ಬಾರಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಪ್ರಭಾವಿ ರಾಜಕಾರಣಿಯ ಸಾಲಿನಲ್ಲಿ ಕೆ. ಜಯಪ್ರಕಾಶ್ ಹೆಗ್ಡೆಯವರು ಒಬ್ಬರಾಗಿ ನಿಲ್ಲುತ್ತಾರೆ.

LEAVE A REPLY

Please enter your comment!
Please enter your name here