ಹಳೆಯಂಗಡಿ : ಯುವತಿ-ಮಹಿಳಾ ಮಂಡಲದ ವತಿಯಿಂದ ಕೋವಿಡ್-19 ಜಾಗೃತಿ ಕಾರ್ಯಕ್ರಮ

0
84

ಹಳೆಯಂಗಡಿ ನ.1: ಜಿಲ್ಲಾ ಪ್ರಶಸ್ತಿ ಪುರಸ್ಕೃತ, ಯುವತಿ ಮತ್ತು ಮಹಿಳಾ ಮಂಡಲ (ರಿ) ಹಳೆಯಂಗಡಿ ಇದರ ಆಶ್ರಯದಲ್ಲಿ ಕೋವಿಡ್ – 19 ಜಾಗೃತಿ ಕಾರ್ಯಕ್ರಮವು, ಭಾನುವಾರ, ಮಂಡಲದ ಸಭಾಂಗಣದಲ್ಲಿ, ಜಂಟಿ ಸಂಸ್ಥೆಗಳ ಸಹಕಾರದೊಂದಿಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಪೇಪರ್ ಸೀಡ್ ಸಂಸ್ಥೆಯ ಸ್ಥಾಪಕರಾದ ನಿತಿನ್ ವಾಸ್ ಇವರು, “ಸದ್ಯದ ಪರಿಸ್ಥಿತಿಯಲ್ಲಿ ದೇಶವು ಕೊರೋನ ಮುಕ್ತವಾಗಲು ಇಂತಹ ಜಾಗೃತಿ ಕಾರ್ಯಕ್ರಮವು ಇನ್ನೂ ಹೆಚ್ಚು ಹೆಚ್ಚು ನಡೆಯಬೇಕು” ಎಂದರು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಆಯುಷ್ ಇಲಾಖೆ ಬಳ್ಕುಂಜೆಯ ವೈದ್ಯಾಧಿಕಾರಿ ಡಾ|ಶೋಭಾರಾಣಿ ನಮ್ಮ ಕಾರ್ಯಕ್ರಮದಲ್ಲಿ ಕೋವಿಡ್ -19 ಬಗ್ಗೆ ಅತಿ ಅಮೂಲ್ಯವಾದ ಮಾಹಿತಿಯನ್ನು ನೀಡಿದರು.

ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಲಹಾ ಸಮಿತಿಯ ಅಧ್ಯಕ್ಷರು ಸದಾಶಿವ ಅಂಚನ್ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಇವರೊಂದಿಗೆ ಯುವತಿ ಮತ್ತು ಮಹಿಳಾ ಮಂಡಲದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಇತರ ಸದಸ್ಯರು ಉಪಸ್ಥಿತರಿದ್ದರು.

ಯುವತಿ ಮಂಡಲದ ಅಧ್ಯಕ್ಷೆ ಕುಮಾರಿ ದಿವ್ಯಶ್ರೀ ಕೋಟ್ಯಾನ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಮಹಿಳಾ ಮಂಡಲದ ಕೋಶಾಧಿಕಾರಿ ರಾಜೇಶ್ವರಿ ರಾಮನಗರ ಅತಿಥಿಗಳನ್ನು ಪರಿಚಯಿಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ರೇಷ್ಮಾ ಧನ್ಯವಾದ ಅರ್ಪಿಸಿದರು. ಮಹಿಳಾ ಮಂಡಲದ ಕಾರ್ಯದರ್ಶಿ ಪ್ರೇಮಲತಾ ಯೋಗೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here