ದ.ಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ : ಉಸ್ತುವಾರಿ ಸಚಿವ

0
234
Tap to know MORE!

ಮಂಗಳೂರು : ಆಯುಷ್ಮಾನ್ ಭಾರತ್ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಂಪೂರ್ಣ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ನಿನ್ನೆ ರಾತ್ರಿ ಘೋಷಿಸಿದ್ದಾರೆ.

ನಿನ್ನೆ ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಮತ್ತು ಸಾಮರ್ಥ್ಯ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಬಿಪಿಎಲ್, ಎಪಿಎಲ್ ಕಾರ್ಡ್‌ದಾರರು, ರೇಶನ್ ಕಾರ್ಡ್‌ ಇಲ್ಲದವರು , ವಲಸೆ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಕೂಡ ಜಿಲ್ಲೆಯ ವೈದ್ಯಕೀಯ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ.

“ಆಯುಷ್ಮಾನ್ ಭಾರತ್ ಕಾರ್ಡುದಾರರಿಗೆ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿಯೂ ವೈದ್ಯಕೀಯ ಚಿಕಿತ್ಸೆ ಪಡೆಯಲು ಅರ್ಹತೆ ಇದೆ. ಅದಲ್ಲದೆ ರೋಗಿಗಳ ಬಳಿ ಆಧಾರ್ ಕಾರ್ಡ್ ಇದ್ದರೂ ಸಾಕು. ಅವರು ಎಪಿಎಲ್/ಬಿಪಿಎಲ್ ಎಂಬುವುದು ಮುಖ್ಯವಲ್ಲ. ಆಧಾರ್ ಕಾರ್ಡೇ ಅರ್ಹತೆ” ಎಂದು ಅವರು ಸ್ಪಷ್ಟವಾಗಿ ಹೇಳಿದರು.

“ಪ್ರತಿಯೊಂದು ಆಸ್ಪತ್ರೆಗೆ ನಮ್ಮ ಇಲಾಖೆಯಿಂದ ಆರೋಗ್ಯ ಮಿತ್ರನನ್ನು ನಿಯೋಜಿಸಲಾಗಿದೆ ಹಾಗೂ ಪ್ರತಿ ಆಸ್ಪತ್ರೆಯಲ್ಲಿಯೂ ಒಂದು ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ರ ಕೊರೋನಾ ದೃಢಪಟ್ಟ ರೋಗಿಗಳು ಅಲ್ಲಿ ತಮ್ಮ ಆಧಾರ್ ಕಾರ್ಡ್ ತೋರಿಸಿದರೆ ಸಾಕು. ಅವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು” ಎಂದು ಅವರು ಹೇಳಿದರು.

“ಪ್ರಸ್ತುತ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ 2,000 ಕ್ಕೂ ಹೆಚ್ಚು ಹಾಸಿಗೆಗಳಿವೆ. ಅಗತ್ಯ ಬಿದ್ದರೆ, ಖಾಸಗಿ ಮೆಡಿಕಲ್ ಕಾಲೇಜುಗಳ ಹಾಸ್ಟೆಲ್ ಸೌಲಭ್ಯಗಳನ್ನು ಸೋಂಕಿತರ ಚಿಕಿತ್ಸೆಗೆ ಬಳಸಲಾಗುವುದು” ಎಂದು ಅವರು ಹೇಳಿದರು

LEAVE A REPLY

Please enter your comment!
Please enter your name here