ಜುಲೈ 20ರಂದು ಹೊರ ಬೀಳಲಿದೆ ದ್ವಿತೀಯ ಪಿಯುಸಿ ಫಲಿತಾಂಶ

0
165
Tap to know MORE!

ಕೊರೋನಾ ಭೀತಿಯಿಂದ ಜಾರಿಯಲ್ಲಿದ್ದ ಲಾಕ್ಡೌನ್ ಕಾರಣದಿಂದಾಗಿ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಬಾಕಿ ಉಳಿದಿತ್ತು. ಕೊರೋನಾ ಸಂಕಷ್ಟದ ನಡುವೆಯೂ, ಬಾಕಿ ಉಳಿದಿದ್ದಂತ ಇಂಗ್ಲೀಷ್ ಪರೀಕ್ಷೆ ಕಳೆದ ತಿಂಗಳು ಮುಕ್ತಾಯಗೊಂಡಿತ್ತು. ಇದೀಗ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಫಲಿತಾಂಶ ಯಾವತ್ತು ಹೊರಬರಲಿದೆ ಎಂಬ ಕೌತುಕ.

ಇದಕ್ಕೆ ಉತ್ತರಿಸಿರುಲ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, “ದ್ವಿತೀಯ ಪಿಯುಸಿ ಫಲಿತಾಂಶವು ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಸ್ಪಷ್ಟ ಪಡಿಸುತ್ತಿದ್ದೇನೆ” ಎಂಬುದಾಗಿ ತಿಳಿಸಿದ್ದಾರೆ. ಹೀಗಾಗಿ ಜುಲೈ 20ರ ಅಸುಪಾಸಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಬಹುದು.

ರಾಜ್ಯದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟಗೊಳ್ಳಲಿದೆ ಎಂಬ ವಿದ್ಯಾರ್ಥಿಗಳು, ಪೋಷಕರ ಕುತೂಹಲಕ್ಕೆ ಸ್ಪಷ್ಟ ಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ.

LEAVE A REPLY

Please enter your comment!
Please enter your name here