2023ರಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ : ನಿಖಿಲ್

0
201
Tap to know MORE!

ರಾಮನಗರ: 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರವಾಸ ಮಾಡಿ ಯುವ ಕಾರ್ಯಕರ್ತರನ್ನು ಸಂಘಟಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ಶಿರಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದ ಬಿಜೆಪಿ!

ಮುಂಬರುವ ಗ್ರಾಪಂ, ತಾಪಂ, ಜಿಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಯುವಕರಿಗೆ ಆಧ್ಯತೆ ಕೊಡುವುದಾಗಿ ಹೇಳಿದರು. 2023ರ ಸಾರ್ವತ್ರಿಕ ಚುನಾವಣೆ ವೇಳೆ ತಾವು ರಾಮನಗರದಿಂದ ಸ್ಪರ್ಧಿಸುವ ಉದ್ದೇಶವಿಲ್ಲ. ಆದರೆ ಈ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದರು.

ಶಿರಾದಲ್ಲಿ ಪಕ್ಷ ಸೋಲು ಕಂಡಿರುವುದು ನೋವು ತಂದಿದೆ. ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳ ಮತದಾರರ ತೀರ್ಪನ್ನು ಗೌರವಿಸುವುದಾಗಿ ಹೇಳಿದ ಅವರು, ಸೋಲಿಗೆ ಪಕ್ಷದಲ್ಲಿ ಆತ್ಮಾವಲೋಕನ ನಡೆಯುತ್ತಿದೆ ಎಂದರು.

ರಾಮನಗರ ಕ್ಷೇತ್ರದಲ್ಲಿ ಪ್ರವಾಸ ಮಾಡುವುದಾಗಿ, ಇಲ್ಲಿನ ಸಮಸ್ಯೆಗಳನ್ನು ಕ್ಷೇತ್ರದ ಶಾಸಕರು ಹಾಗೂ ತಮ್ಮ ತಾಯಿಯವರಾದ ಅನಿತಾ ಕುಮಾರಸ್ವಾಮಿಯವರ ಗಮನಕ್ಕೆ ತರುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here