ನಮಗೆ ಹೆಚ್ಚಿನ ಸ್ಥಾನ ಲಭಿಸಿದರೂ, ಜೆಡಿಯು ನಾಯಕ ನಿತೀಶ್ ಕುಮಾರ್‌ರವರೇ ಮುಖ್ಯಮಂತ್ರಿ : ಬಿಜೆಪಿ ಸ್ಪಷ್ಟನೆ

0
131
Tap to know MORE!

ಪಾಟ್ನಾ ನ.11: ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಗೊಂದಲಕ್ಕೆ ಅವಕಾಶವೇ ಇಲ್ಲ. ನಿತೀಶ್ ಕುಮಾರ್ ಅವರನ್ನು ಸಿಎಂ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಭಾರತೀಯ ಜನತಾ ಪಕ್ಷ ಬುಧವಾರ (ನ. 11) ಸ್ಪಷ್ಟಪಡಿಸಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 74ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಎನ್ ಡಿಎಯನ್ನು ಪೂರ್ಣ ಬಹುಮತದತ್ತ ಕೊಂಡೊಯ್ಯುವಂತೆ ಮಾಡುವಲ್ಲಿ ಯಶಸ್ವಿಯಾಗಿತ್ತು. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಈ ಬಾರಿ ಕೇವಲ 43 ಸ್ಥಾನ ಪಡೆದಿತ್ತು.

ಬಿಹಾರದ ಮೈತ್ರಿರಾಜಕಾರಣದಲ್ಲಿ ನಿತೀಶ್ ಕುಮಾರ್ ಅವರು “ಬಿಗ್ ಬ್ರದರ್” ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಬಿಹಾರದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ ಏಕೈಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಸಿಎಂ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ.

ಆದರೆ ಊಹಾಪೋಹಗಳಿಗೆ ಬೆಲೆ ಕೊಡಬೇಕಾಗಿಲ್ಲ. ನಿತೀಶ್ ಜೀ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇದು ಬಿಜೆಪಿಯ ಬದ್ಧತೆಯಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಡೆಪ್ಯುಟಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಕೆಲವರು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕೆಲವರು ಕಡಿಮೆ ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆ. ಆದರೆ ನಾವೆಲ್ಲರೂ ಸಮಾನ ಪಾಲುದಾರರಾಗಿದ್ದೇವೆ ಎಂದು ಮೋದಿ ಹೇಳಿದರು.

LEAVE A REPLY

Please enter your comment!
Please enter your name here