ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೋನಾ | ಹಲವಾರು ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದ ನಡ್ಡಾ!

0
132
Tap to know MORE!

ನವದೆಹಲಿ(ಡಿ.13): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕಾರ್ಯಚಟುವಟಿಕೆಗೆ ಮತ್ತೊಂದು ಹಿನ್ನಡೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ದಾಳಿ ಎದುರಿಸಿದ್ದ ಜೆಪಿ ನಡ್ಡಾಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ಜೆಪಿ ನಡ್ಡ ಟ್ವಿಟರ್ ಮೂಲಕ ಕೊರೋನಾ ಮಾಹಿತಿ ಬಹಿರಂಗ ಪಡಿಸಿದ್ದಾರೆ.

ಕೊರೋನಾ ಲಕ್ಷಣಗಳು ಕಾಣಿಸಿಕೊಂಡ ಕಾರಣ ತಕ್ಷಣವೇ ಪರೀಕ್ಷೆ ಮಾಡಿಸಿದ್ದೇನೆ. ಈ ವೇಳೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಯಾವುದೇ ಸಮಸ್ಯೆ ಇಲ್ಲ, ಆರೋಗ್ಯವಾಗಿದ್ದೇನೆ ಎಂದು 60 ವರ್ಷದ ಜೆಪಿ ನಡ್ಡ ಹೇಳಿದ್ದಾರೆ. ಜೆಪಿ ನಡ್ಡ ಇದೀಗ ತಮ್ಮ ಮನೆಯಲ್ಲೇ ಐಸೋಲೇಶನ್‌ಗೆ ಒಳಗಾಗಿದ್ದಾರೆ.

ಟ್ವೀಟ್ ಮಾಡಿರುವ ಜೆಪಿ ನಡ್ಡಾ, ತನ್ನ ಸಂಪರ್ಕಕ್ಕೆ ಬಂದವರೆಲ್ಲಾ ಮುಂಜಾಗ್ರತೆ ವಹಿಸಬೇಕಾಗಿ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here